Headlines

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?


ಸಮಾಜ ಕಲ್ಯಾಣ ಜಲಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ತುಮಕೂರು, ಮಾರ್ಚ್ 21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59) ಆತ್ಮಹತ್ಯೆ (ಆತ್ಮಹತ್ಯೆ) ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅವರು ನೇಣಿಗೆ ಶರಣಾಗಿದ್ದರೆ, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.

ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ

ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ. ಜೊತೆಗೆ, ಕೃಷ್ಣಪ್ಪ ದೇವರು ಅವರಿಗೆ ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಸಾವಿಗೂ ಮುನ್ನ ಅಧಿಕಾರಿ ಮಾಡಿದ ವೀಡಿಯೋ ಇಲ್ಲಿದೆ

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸಾವಿಗೆ ಮುನ್ನ ಡೆತ್ ನೋಟ್‌ಗಳನ್ನು ಬರೆದಿರುವುದು ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಚನೆ ವಶಪಡಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *