Headlines

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?


ರಾಜ್ ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಕನ್ನಡದ ವರನಟ ಡಾ. ರಾಜ್ ಕುಮಾರ್ (ರಾಜಕುಮಾರ್) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ನೀಡಿದ ಸಿನಿಮಾಗಳು ಅನೇಕರಿಗೆ ಮಾದರಿ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಕೇವಲ ಕನ್ನಡದಲ್ಲಿದೆ, ಪರಭಾಷೆಯ ಮಂದಿಗೂ ರಾಜ್ ಕುಮಾರ್ ತಿಳಿದಿದ್ದಾರೆ. ರಾಜ್ ಕುಮಾರ್ ಅವರ ಹಾಡುಗಳು ಕೂಡ ಅನೇಕರ ಫೇವರಿಟ್. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜ್ ಕುಮಾರ್ ಅವರ ಹಾಡನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ಅಣ್ಣಾವ್ರ ಅಭಿಮಾನಿಗಳು ಹಾಗೂ ಕನ್ನಡಿಗರಿಗೆ ಖುಷಿ ಕೊಟ್ಟಿದೆ.

ರಾಜ್ ಕುಮಾರ್ ಅವರು ಬಾಂಡ್ ಸಿನಿಮಾಗಳಿಂದ ಹಿಡಿದು, ಪೌರಾಣಿಕ ಸಿನಿಮಾಗಳವರೆಗೆ, ಆ್ಯಕ್ಷನ್ ಸಿನಿಮಾದಿಂದ ಹಿಡಿದು ಭಕ್ತಿ ಪ್ರಧಾನ ಸಿನಿಮಾವರೆಗೆ ಎಲ್ಲ ರೀತಿಯ ಚಿತ್ರ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ‘ಶ್ರೀ ಕೃಷ್ಣದೇವರಾಯ’ ಸಿನಿಮಾ ಕೂಡ ಒಂದು. ಈ ಚಿತ್ರದಲ್ಲಿ ರಾಜ್ ಕುಮಾರ್ ಅವರು ಕೃಷ್ಣದೇವರಾಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ 1970ರಲ್ಲಿ ರಿಲೀಸ್ ಆಯಿತು. ಈ ‘ಶ್ರೀ ಚಾನ್ಮುಂಡೇಶ್ವರಿ..’ ಹಾಡು ಗಮನ ಸೆಳೆಯಿತು. ಇದನ್ನು ಮೋದಿ ಶೇರ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯಾರಾದರೂ ನಮಿಸಿದರೆ ರಾಜ್ ಕುಮಾರ್ ಏನು ಹೇಳಿದರು? ರಜನಿ ಕೂಡ ಅಚ್ಚರಿಪಟ್ಟರು

‘ಶ್ರೀ ಚಾಮುಂಡೇಶ್ವರಿ..’ ಹಾಡಿನ ಯೂಟ್ಯೂಬ್ ಲಿಂಕ್ ಶೇರ್ ಮಾಡಿಕೊಂಡಿರೋ ಮೋದಿ, ‘ಜಗತ್ಜನನಿ ಮಾತೆಯ ಮೇಲಿನ ಅಚಲ ನಂಬಿಕೆಯು ಆಕೆಯ ಭಕ್ತರಲ್ಲಿ ಹೊಸ ವಸ್ತು ಮತ್ತು ಶಕ್ತಿಯನ್ನು ತುಂಬಲಿದೆ’ ಎಂದು ಹೇಳಿದ್ದಾರೆ. ಈ ಮೂಲಕ ದೈವದ ಭಕ್ತಿ ಸಾರುವ ವಿಡಿಯೋ ಹಂಚಿಕೊಂಡಿದ್ದಾರೆ.

‘ಶ್ರೀ ಚಾನ್ಮುಂಡೇಶ್ವರಿ..’ಹಾಡನ್ನು ಪಿ. ಲೀಲಾ, ಎಸ್ ಗೋವಿಂದರಾಜು ಹಾಡಿದ್ದಾರೆ. ಪ್ರಭಾಕರ ಶಾಸ್ತ್ರಿ ಅವರು ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಟಿಜಿ ಲಿಂಗಪ್ಪ ಅವರು ಹಾಡಿಗೆ ಸಂಗೀತ ನೀಡಿದ್ದಾರೆ. ರಾಜ್ ಕುಮಾರ್ ಹಾಗೂ ಭಾರತಿ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 





Source link

Leave a Reply

Your email address will not be published. Required fields are marked *