
ತಿರುವನಂತಪುರಂ, ಮಾರ್ಚ್ 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (ರಾಹುಲ್ ಗಾಂಧಿ) ವಿರುದ್ಧ ತೀವ್ರ ವಾಗ್ದಾಳಿ ಗಾಂಧಿ ನಡೆಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಹುಲ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿಯ ‘ಬಿ-ಟೀಮ್’ ಎಂದು ಟೀಕಿಸಿದ್ದಾರೆ. ಓಲೈಕೆ ರಾಜಕೀಯ ಮಾಡುವ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಒಂದೇ ರೀತಿಯಲ್ಲಿ ವಿರೋಧಿಸಿವೆ. ಅವೆರಡೂ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇರಳದ ಸಿಎಂ ಆರೋಪಿಸಿದ್ದಾರೆ.
ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅನುಭವಗಳಿಂದ ಕಲಿಯಲು ಇಷ್ಟಪಡುವ ವ್ಯಕ್ತಿಗಳಲ್ಲಿ ರಾಹುಲ್ ಗಾಂಧಿ ಕೂಡ ಒಬ್ಬರು. ರಾಷ್ಟ್ರೀಯ ಮಟ್ಟದ ವ್ಯವಹಾರಗಳನ್ನು ಪರಿಶೀಲಿಸಿದರೆ ನಮಗೆ ಕಾಣುವುದೇನೆಂದರೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಬಿಜೆಪಿಯ ನಿಜವಾದ ಬಿ-ಟೀಮ್ ಆಗಿದೆ. ಆ ಬಗ್ಗೆ ನಾನು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ” ಎಂದು ಹೇಳಿದರು.
ಇದನ್ನೂ ಓದಿ: ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳಿಗೆ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ
ಕಾಂಗ್ರೆಸ್ ಒಲೈಕೆಯ ರಾಜಕೀಯ ಮಾಡುತ್ತಿದೆ. ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ವಿಜಯನ್ ಆರೋಪಿಸಿದರು. ನಾವು ಯಾವುದೇ ಕೋಮುವಾದಿ ಶಕ್ತಿಯೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾವು ಎಲ್ಲಾ ಕೋಮುವಾದವನ್ನು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.
ವೀಡಿಯೊ | ಕಣ್ಣೂರು: ಕೇರಳದಲ್ಲಿ ಕಾಂಗ್ರೆಸ್ ಬಿಜೆಪಿಯ ಬಿ ಟೀಂ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.@ಪಿನರಾಯಿವಿಜಯನ್) ಪಿಟಿಐ ವೀಡಿಯೊಗಳಿಗೆ.#ಕಾಂಗ್ರೆಸ್ #ಕೇರಳ ಪೋಲ್ಸ್
(ಪೂರ್ಣ ವೀಡಿಯೊ PTI ವೀಡಿಯೊಗಳಲ್ಲಿ ಲಭ್ಯವಿದೆ – https://t.co/n147TvrpG7) pic.twitter.com/GrAVhg6riU
— ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (@PTI_News) ಮಾರ್ಚ್ 21, 2026
ಕೇರಳದಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ, ಮೇ 4ರಂದು ಫಲಿತಾಂಶ ಹೊರಬೀಳಲಿದೆ. ಕೇರಳದಲ್ಲಿ ಬಿಜೆಪಿ, ಕಾಂಗ್ರೆಸ್ ಚುನಾವಣಾ ಪ್ರಚಾರವನ್ನು ಆರಂಭಿಸಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ