
ಬೆಂಗಳೂರು, ಮಾರ್ಚ್ 22: ನಿಂತಿದ್ದ ಈಚರ್ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ದಾರುಣ ವ್ಯಾಪ್ತಿಯ ಕಾರ್ಯಕ್ರಮ ಬೆಂಗಳೂರಿನ ಕೆ.ಆರ್.ಪುರಂ ಸಂಚಾರ ಠಾಣಾ ಮೇಡಹಳ್ಳಿ ಮೇಲ್ಸೇತುವೆಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋದಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ವೈಟ್ ಫೀಲ್ಡ್ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ.
ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಟೈರ್ ಬ್ಲಾಸ್ಟ್ ಆಗಿ ನಿಂತಿತ್ತು. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಚಾಲಕ ಟೈರ್ ಚೇಂಜ್ ಮಾಡಲಾಗುತ್ತಿದೆ. ಇದೇ ವೇಳೆ ನಿಂತಿದ್ದ ಕ್ಯಾಂಟರ್‌ಗೆ ಹಿಂದೆ ಗೂಡ್ಸ್ ಆಟೋ ಡಿಕ್ಕಿಯಾಗಿದೆ. ಸ್ಥಳಕ್ಕೆ ಡಿಸಿಪಿ ನೇಮಗೌಡ ಮತ್ತು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕೆ.ಆರ್.ಪುರಂ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
(ಮಾಹಿತಿ ಅಪ್‌ಡೇಟ್ ಆಗುತ್ತಿದೆ)