
ದಾವಣಗೆರೆ (ಮಾರ್ಚ್ 22): ಇದೇ ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ (ಅಸೆಂಬ್ಲಿ ಕ್ಷೇತ್ರ) ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ದಾವಣಗೆರೆ (ದಾವಣಗೆರೆ) ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಶಾಮನೂರು (ಸಮರ್ಥ್ ಶಾಮನೂರು) ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ, ದಾವಣಗೆರೆಯಲ್ಲಿ ಶಾಮನೂರು ಮೊಮ್ಮಗನಿಗೆ ಟಿಕೆಟ್ ಘೋಷಣೆ ಆಗ್ತಿದ್ದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ (ಕಾಂಗ್ರೆಸ್) ವಿರುದ್ಧ ಅಲ್ಪಸಂಖ್ಯಾತರು ಸಿಡಿದೆದ್ದಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು,ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾಳೆ (ಮಾರ್ಚ್ 23) ನೂರಾರು ಬೆಂಬಲಿಗರ ಜೊತೆ ತೆರಳಿ ನಾಮಪತ್ರ ಸಲ್ಲಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ. ಇದರ ಆರಂಭದಲ್ಲೇ ಕಾಂಗ್ರೆಸ್ ನಲ್ಲಿ ಅಸಮಧಾನ ಸ್ಫೋಟಗೊಂಡಿದೆ.