ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು


ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುತ್ತ ದುಷ್ಟರು

ಹಾಸನ, ಮಾರ್ಚ್ 22: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಸ್ನೇಹಿತರ ಗ್ಯಾಂಗ್ ಕೊಂದು (ಕೊಲ್ಲಲು) ಶವ ಸುತ್ತು ಹಾಕಿರುವಂತಹ ಘಟನೆ ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾಡಯ್ಯನಕೊಪ್ಪಲು ನಿವಾಸಿ ವರುಣ್(22) ಕೊಲೆಯಾದ ಯುವಕ. ಹಣಕಾಸು ವಿಚಾರದಲ್ಲಿ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಶಶಾಂಕ್, ಸತೀಶ್, ಕಿರಣ್, ಅಭಿ, ಜೀವನ್, ಚೇತನ್, ಪೃಥ್ವಿಕ್, ಗಜ ಅಲಿಯಾಸ್ ಪ್ರಜ್ವಲ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.

ನಡೆದಿದ್ದೇನು?

ಮಾರ್ಚ್ 10 ರಿಂದ ವರುಣ್ ಕಾಣೆಯಾಗಿದ್ದಾನೆ. ಹಣಕಾಸು ವಿಚಾರದಲ್ಲಿ ವರುಣ್, ಸ್ನೇಹಿತ ಲೋಹಿತ್‌ನ ಸ್ನೇಹಿತರ ಗ್ಯಾಂಗ್ ಅಪಹರಿಸಿದೆ. ಹಂಗರಹಳ್ಳಿಯ ತೋಟದ ಮನೆಯಲ್ಲಿ ಇಬ್ಬರನ್ನು ಕೂಡಿಹಾಕಿದೆ. ಹಲ್ಲೆಗೊಳಗಾದ ಲೋಹಿತ್ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದ. ವರುಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಂದಿದ್ದಾರೆ. ನಂತರ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ವರುಣ್ ಶವವನ್ನು ಸಂಪೂರ್ಣ ಸುತ್ತು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಪ್ರಕರಣಗಳು!

ಇತ್ತ ಮಾರ್ಚ್ 15 ರಂದು ಪುತ್ರ ನಾಪತ್ತೆ ಬಗ್ಗೆ ತಾಯಿ ಕಲಾವತಿ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಿಸಿಕೊಂಡು ಗಂಡಸಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಪೊಲೀಸರು ತನಿಖೆ ವೇಳೆ ವರುಣ್ ಕೊಲೆಯಾಗಿರುವ ವಿಚಾರ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಸಮಾಜ ಕಲ್ಯಾಣ ಜಲಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ಸಿನಿಮೀಯ ರೀತಿಯಲ್ಲಿ ಅಪಹರಿಸಿ ಹಲ್ಲೆ ನಡೆಸಿ ಹತ್ಯೆಗೈದಿದ್ದ ಸ್ನೇಹಿತರ ವಿರುದ್ಧ ಮಾ.19ರಂದು ಹಾಸನದಲ್ಲಿ ನಡೆದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವರುಣ್ ಅಪಹರಣ ಮತ್ತು ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *