
ತೆಲಂಗಾಣ, ಮಾ.23: ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾದ ಭೀಕರ ರಸ್ತೆ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಒಬ್ಬ ಬಾಲಕ ಓಡುತ್ತಾ ರಸ್ತೆ ದಾಟಲು ಯತ್ನಿಸುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು, ಅವನು ಸ್ಪಲ್ಪ ದೂಎಕ್ಕೆ ಹೋಗಿ ಬಿದ್ದಿರುವ ದೃಶ್ಯವಾಗಿದೆ. ಇನ್ನು ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೆಲವು ಪ್ರಕಾರ, ಈ ಬಾಲಕ 11 ವರ್ಷದ ಅನಿರುದ್ಧ ಹೇಳಲಾಗುತ್ತಿದ್ದು, ಘಟನೆ ತೆಲಂಗಾಣ ರಾಜ್ಯದ ಯಾದಾದ್ರಿ ಭುವನಗಿರಿ ಜಿಲ್ಲೆಯ ಪಾಲಾಡುಗು ಗ್ರಾಮದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಇನ್ನು ಈ ಬಾಲಕನನ್ನು ಯಾವ ವ್ಯಕ್ತಿ ಮತ್ತು ಆತನ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇನ್ನು ಬಾಲಕನ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಈ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲವು ಬಾಲಕನ ನಿರ್ಲಕ್ಷ್ಯವನ್ನು ಹೊಣೆಮಾಡಿದರೆ, ಇನ್ನೂ ಕೆಲವರು ಕಾರು ಅತಿವೇಗ (ಸುಮಾರು 109 ಕಿಮೀ/ಗಂ)ವೇ ಪ್ರಮುಖ ಕಾರಣ ಎಂದು ವಾದಿಸುತ್ತಿದ್ದಾರೆ. ಈ ದುರ್ಘಟನೆ ರಸ್ತೆ ಸುರಕ್ಷತೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಮತ್ತೆ ನೆನಪಿಸುತ್ತದೆ. ಚಾಲಕರು ವೇಗವನ್ನು ನಿಯಂತ್ರಿಸಿಕೊಂಡು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು. ಪಾದಚಾರಿಗಳು, ವಿಶೇಷವಾಗಿ ಮಕ್ಕಳು, ರಸ್ತೆ ದಾಟುವಾಗ ಜಾಗ್ರತೆ ವಹಿಸುವುದು ಅತ್ಯಂತ ಅಗತ್ಯ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ