Headlines

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಕಾರುಬಾರು! | Davanagere South Congress Rebellion Samarth Shamanur Nomination Zameer Ahmed Skips Sadiq Pailwan Sat

ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ; ಸಮರ್ಥ್ ಶಾಮನೂರು ನಾಮಪತ್ರಕ್ಕೆ ಜಮೀರ್ ಗೈರು, ಸಾದಿಕ್ ಪೈಲ್ವಾನ್ ಕಾರುಬಾರು! | Davanagere South Congress Rebellion Samarth Shamanur Nomination Zameer Ahmed Skips Sadiq Pailwan Sat


ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದು, ಈ ಕಾರ್ಯಕ್ರಮಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಗೈರಾಗಿದ್ದಾರೆ. ಟಿಕೆಟ್ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಜಮೀರ್ ಬೆಂಬಲಿಗ ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ದಾವಣಗೆರೆ (ಮಾ.23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಕಾರಣ ಈಗ ರಂಗೇರಿದೆ. ಕಾಂಗ್ರೆಸ್ ಭದ್ರಕೋಟೆ ಎಂದೇ ಕರೆಯಲ್ಪಡುವ ಈ ಕ್ಷೇತ್ರದಲ್ಲಿ ಈಗ ಒಳಗೊಳಗೆ ಬಂಡಾಯದ ಕಿಚ್ಚು ಹತ್ತಿಕೊಂಡಿದೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಜಮೀರ್ ಅಹಮದ್ ಖಾನ್ ಗೈರು ಮತ್ತು ‘ಅಸೆಂಬ್ಲಿ’ ನೆಪ:

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು ಎಂಬುದು ಜಮೀರ್ ಅಹಮದ್ ಖಾನ್ ಅವರ ಬಲವಾದ ಬೇಡಿಕೆಯಾಗಿತ್ತು. ಆದರೆ, ಹೈಕಮಾಂಡ್ ಶಾಮನೂರು ಕುಟುಂಬದ ಕುಡಿ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಅಸಮಾಧಾನಗೊಂಡಿರುವ ಜಮೀರ್, ಇಂದು ಸಮರ್ಥ್ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹಾಜರಾಗಿಲ್ಲ. ತಮ್ಮ ಗೈರುಹಾಜರಿಗೆ ವಿಧಾನಸಭೆ ಕಲಾಪದ ಕಾರಣ ನೀಡಿದ್ದಾರೆ ಜಮೀರ್ ಅಹಮದ್. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪವಿದೆ, ನಾನು ಉತ್ತರಿಸಬೇಕು ಎಂಬ ಕಾರಣಕ್ಕೆ ಕಲಾಪದಲ್ಲಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಆದರೆ, ವಾಸ್ತವದಲ್ಲಿ ಇಂದು ಸ್ಪೀಕರ್ ಅವರು ಪ್ರಶ್ನೋತ್ತರ ಕಲಾಪದ ಬದಲು ಬಜೆಟ್ ಮೇಲಿನ ಚರ್ಚೆಗೆ ಅವಕಾಶ ನೀಡಿದ್ದಾರೆ. ಹೀಗಾಗಿ, ಜಮೀರ್ ಅವರು ಕೇವಲ ಅಸಮಾಧಾನದ ಹಿನ್ನೆಲೆಯಲ್ಲೇ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ.

ಟಿಕೆಟ್ ಜಟಾಪಟಿ ಮತ್ತು ರಾಜೀನಾಮೆ ಎಚ್ಚರಿಕೆ:

ದಾವಣಗೆರೆ ದಕ್ಷಿಣ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಮೀರ್ ಅಹಮದ್ ಖಾನ್ ನಡುವೆ ಈ ಹಿಂದೆ ದೊಡ್ಡ ಮಟ್ಟದ ಜಟಾಪಟಿ ನಡೆದಿತ್ತು. ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡಿಸಲೇಬೇಕು ಎಂದು ಪಟ್ಟು ಹಿಡಿದಿದ್ದ ಜಮೀರ್, ಈ ವಿಚಾರಕ್ಕಾಗಿ ರಾಜೀನಾಮೆ ನೀಡುವ ಎಚ್ಚರಿಕೆಯನ್ನು ನೀಡಿದ್ದರು ಎನ್ನಲಾಗಿದೆ. ಆದರೆ, ಅಂತಿಮವಾಗಿ ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಒಲಿದಿದೆ. ಇದೇ ಕಾರಣಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಖುದ್ದು ಕರೆ ಮಾಡಿ ಆಹ್ವಾನ ನೀಡಿದ್ದರೂ ಜಮೀರ್ ಅಹಮದ್ ಅಂತರ ಕಾಯ್ದುಕೊಂಡಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ಎಂಟ್ರಿ:

ಇತ್ತ ಕಾಂಗ್ರೆಸ್ ಒಳಗಿನ ಭಿನ್ನಮತದ ಲಾಭ ಪಡೆಯಲು ಸಿದ್ಧರಾಗಿರುವ ಜಮೀರ್ ಬೆಂಬಲಿತ ಅಲ್ಪಸಂಖ್ಯಾತ ನಾಯಕ ಸಾದಿಕ್ ಪೈಲ್ವಾನ್ ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ವಂಚಿತ ಸಾದಿಕ್ ಪೈಲ್ವಾನ್ ಇಂದು ಬೃಹತ್ ಮೆರವಣಿಗೆಯ ಮೂಲಕ ಶಕ್ತಿ ಪ್ರದರ್ಶನ ಮಾಡಿ, ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಎದುರು ಸಾವಿರಾರು ಬೆಂಬಲಿಗರೊಂದಿಗೆ ಆಗಮಿಸಿದ ಸಾದಿಕ್, “ನನ್ನ ಹೋರಾಟ ಸಮುದಾಯದ ಹಕ್ಕಿಗಾಗಿ” ಎಂದು ಘೋಷಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಇಂದು ಲಾಸ್ಟ್ ಡೇ; ಅಖಾಡದಲ್ಲಿ ಶಕ್ತಿ ಪ್ರದರ್ಶನ! | Nomination Last Day | Suvarna News

ಕಾಂಗ್ರೆಸ್‌ಗೆ ಸಂಕಷ್ಟ:

ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರಿಗೆ ಪಕ್ಷದ ಹಿರಿಯ ನಾಯಕರು ಬೆಂಬಲ ನೀಡುತ್ತಿದ್ದರೆ, ಮತ್ತೊಂದೆಡೆ ಮುಸ್ಲಿಂ ಮತಗಳ ಧ್ರುವೀಕರಣದ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆ. ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದರೆ, ಅದು ನೇರವಾಗಿ ಕಾಂಗ್ರೆಸ್ ಮತಬ್ಯಾಂಕ್‌ಗೆ ಪೆಟ್ಟು ನೀಡುವ ಸಾಧ್ಯತೆಯಿದೆ. ಜಮೀರ್ ಅಹಮದ್ ಖಾನ್ ಅವರ ಅಸಮಾಧಾನ ಮತ್ತು ಸಾದಿಕ್ ಪೈಲ್ವಾನ್ ಅವರ ಬಂಡಾಯವನ್ನು ಕಾಂಗ್ರೆಸ್ ಹೇಗೆ ನಿಭಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.



Source link

Leave a Reply

Your email address will not be published. Required fields are marked *