Headlines

ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

ಬೆಂಗಳೂರು ರಸ್ತೆಯಲ್ಲಿ ಯುವಕರ ‘ಬಿಯರ್’ ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್


ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಟ್ರಿಪಲ್ ರೈಡಿಂಗ್, ಮದ್ಯಪಾನ ಮಾಡಿದ ವಿಡಿಯೋ ವೈರಲ್

ಬೆಂಗಳೂರು, ಮಾ.23: ಸಿಲಿಕಾನ್ ಸಿಟಿಯ ಬಿಟಿಎಂ ರಸ್ತೆಯಲ್ಲಿ (ಬಿಟಿಎಂ ರಸ್ತೆ) ಸಂಚಾರಿ ನಿಯಮಾವಳಿ ಗಾಳಿಗೆ ತೂರಿದ ಯುವಕರ ಗುಂಪೊಂದು ಅತಿರೇಕದ ವರ್ತನೆ ತೋರಿದೆ. ಸ್ಕೂಟರ್‌ನಲ್ಲಿ ಮೂವರು ಯುವಕರು ಹೆಲ್ಮೆಟ್ ಇಲ್ಲದೆ ‘ಟ್ರಿಪಲ್ ರೈಡಿಂಗ್’ ಮಾಡುತ್ತಿದ್ದು, ಚಲಿಸುವ ವಾಹನದಲ್ಲೇ ಬಿಯರ್ ಕುಡಿಯುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಮೂವರು ಯುವಕರು ಯಾವುದೇ ಭಯವಿಲ್ಲದೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು, ಹಿಂಬದಿ ಕುಳಿತಿದ್ದ ಯುವಕ ಬಿಯರ್ ಬಾಟಲಿಯನ್ನು ಹಿಡಿದು ಮದ್ಯಪಾನ ಮಾಡುತ್ತಾ ವಿಕೃತವಾಗಿ ಕೈ ಸನ್ನೆಗಳನ್ನು ಮಾಡುತ್ತಿದ್ದ. ಈ ಯುವಕರು ಟ್ರಿಪಲ್ ರೈಡಿಂಗ್, ಹೆಲ್ಮೆಟ್ ರಹಿತ ಪ್ರಯಾಣ ಮತ್ತು ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನದಂತಹ ಗಂಭೀರ ಅಪರಾಧಗಳನ್ನು ಎಸಗಿದ್ದಾರೆ. ಇವರ ಈ ಬೇಜವಾಬ್ದಾರಿ ವರ್ತನೆ ಅವರಿಗಷ್ಟೇ ಅಲ್ಲದೆ, ರಸ್ತೆಯಲ್ಲಿ ಹೋಗುವ ಇತರ ಸಾರ್ವಜನಿಕರಿಗೂ ಪ್ರಾಣಾಪಾಯ ತಂದೊಡ್ಡುವಂತಿತ್ತು. ಈ ದೃಶ್ಯವನ್ನು ಹಿಂದಿನಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಹಿಡಿಯ, @karnatakaportf ಎಂಬ ಎಕ್ಸ್ (X) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋವನ್ನು ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡದೆ, ಕಠಿಣ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *