
ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಮತ್ತು ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸುತ್ತದೆ. ಹಾರ್ಮುಜ್ ಸ್ಟ್ರೇಟ್‌ಗೆ ತಡೆಯಲಾಗುತ್ತಿರುವ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ.
ಯುದ್ಧದಿಂದಾಗಿ ಭಾರತ, ಜಾಗತಿಕವಾಗಿಯೂ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಇದು ಎಲ್ಲಾ ದೇಶಗಳ ಸವಾಲಿನ ಸ್ಥಿತಿ ತಂದಿದೆ. ಇರಾನ್ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದಾರೆ. ಬಿಕ್ಕಟ್ಟು ಉದ್ಭವಗೊಂಡ ಬಳಿಕ ಮೊದಲ ಬಾರಿಗೆ ಪ್ರಧಾನಿಗಳು ಸಂಸತ್ ನಲ್ಲಿ ಆ ಬಗ್ಗೆ ಮಾತನಾಡಿರುವುದು.
ದೇಶದ ಜನರನ್ನು ಉದ್ದೇಶಿಸಿ ಮೋದಿ ಅವರು ಈ ಮೊದಲು ಮಾತನಾಡದೇ ಹೋದರೂ ತೈಲ ಮತ್ತು ಅನಿಲ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ತೈಲ ಮತ್ತು ಗ್ಯಾಸ್ ಪೂರೈಕೆಗೆ ಇರಾನ್ ಜೊತೆಗೂ ಮಾತನಾಡುತ್ತಿದ್ದಾರೆ. ಇತರ ಪರ್ಯಾಯ ಮಾರುಕಟ್ಟೆಗಳನ್ನು ಮುಟ್ಟುತ್ತಿವೆ.
ಈ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಲು ಪ್ರಧಾನಿ ಸಚಿವರು ಹಾಗೂ ಕಾರ್ಯದರ್ಶಿಗಳ ತಂಡವನ್ನು ರಚಿಸಲು ನಿರ್ದೇಶನವಿದೆ. ಎಲ್ಪಿಜಿ ಲಭ್ಯತೆಗಾಗಿ ವಿವಿಧ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ.
ಮತ್ತಷ್ಟು ವಿವರ ನಿರೀಕ್ಷಿಸಲಾಗಿದೆ