
ದಾವಣಗೆರೆ (ಮಾರ್ಚ್ 23): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರಿದ್ದು, ಇಂದು (ಮಾರ್ಚ್ 23) ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಆದರೆ, ಈ ಪ್ರಮುಖ ಕಾರ್ಯಕ್ರಮದಿಂದ ಸಚಿವ ಜಮೀರ್ ಅಹಮದ್ ಖಾನ್ ದೂರ ಉಳಿದಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಕಾಂಗ್ರೆಸ್ ಬಂಡಾಯದ ಅಭ್ಯರ್ಥಿಯಾಗಿ ಮುಸ್ಲಿಂ ಸಮುದಾಯದ ಸಾದಿಕ್ ಪೈಲ್ವಾನ್ ಸಹ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದೆ.
ಮುಸ್ಲಿಂ ಸಮುದಾಯದ ಟಿಕೆಟ್ಗೆ ಬೇಡಿಕೆ ಇಟ್ಟಿತ್ತು. ಆದರೆ, ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಸಾದಿಕ್ ಪೈಲ್ವಾನ್, ಸ್ವಪಕ್ಷದ ವಿರುದ್ಧವೇ ತೊಡೆತಟ್ಟಿದ್ದು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸವಾಲು ಹಾಕಿದ್ದಾರೆ.