ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?

ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?


ಕನ್ನಡದಲ್ಲೂ ಬಿಡುಗಡೆ ಆಯ್ತು 'ಧುರಂಧರ 2': ಇಷ್ಟು ದಿನ ತಡವಾಗಿದ್ದು ಯಾಕೆ?

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ‘ಧುರಂಧರ 2’ (ಧುರಂಧರ 2) ಎಲ್ಲ ಕಡೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 18ರ ಸಂಜೆಯಿಂದಲೇ ಈ ಚಿತ್ರದ ಪ್ರದರ್ಶನ ಆರಂಭವಾಯಿತು. ಆದರೆ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ತಾಂತ್ರಿಕ ಕಾರಣಗಳಿಂದಾಗಿ ಕನ್ನಡ ಅವತರಣಿಕೆಯ (ಧುರಂಧರ 2 ಕನ್ನಡ ಆವೃತ್ತಿ) ಬಿಡುಗಡೆಯ ಕೆಲವು ದಿನಗಳ ಕಾಲ ವಿಳಂಬವಾಗಿತ್ತು. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಈಗ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದೆ. ಕನ್ನಡದ ಪ್ರದರ್ಶನ ಕೂಡ ಈ ‘ಧುರಂಧರ್ 2’ ನೋಡಿ ಎಂಜಾಯ್ ಮಾಡುತ್ತಿದ್ದಾರೆ.

ಕನ್ನಡ ವರ್ಷ ವಿಳಂಬಕ್ಕೆ ಕಾರಣವೇನು? ಮಾರ್ಚ್ 19 ರಂದು ಹಿಂದಿ ಆವೃತ್ತಿಯು ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಯಿತು. ಆದರೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಡಬ್ಬಿಂಗ್ ಆವೃತ್ತಿಗಳು ದಿನಕ್ಕೆ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಕೆಲವು ಪ್ರಮುಖ ಕಾರಣಗಳು ಇವೆ. ಪ್ರಾದೇಶಿಕ ಭಾಷಾ ಸೆನ್ಸಾರ್ ಪ್ರಮಾಣಪತ್ರ ಸಿಗುವುದು ವಿಳಂಬವಾದ ಕಾರಣ ಕೊನೆಯ ಕ್ಷಣದಲ್ಲಿ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ.

‘ಧುರಂಧರ್ 2’ ಚಿತ್ರದ ಡಬ್ಬಿಂಗ್ ಕೆಲಸಗಳು ಅಂತಿಮ ಹಂತದಲ್ಲಿ ಉಳಿದಿದ್ದವು ಮತ್ತು ಡಿಜಿಟಲ್ ಕಾಂಟೆಂಟ್ (DCP) ಚಿತ್ರಮಂದಿರಗಳಿಗೆ ತಲುಪಲು ಸಮಯ ಹಿಡಿಯಿತು ಎಂಬ ಮಾಹಿತಿ ಕೂಡ ಇದೆ. ಆ ಕಾರಣದಿಂದ ಕನ್ನಡ ವರ್ಷ ಬಿಡುಗಡೆಗೆ ಸಮಸ್ಯೆಯಾಗಿದೆ. ಅದಕ್ಕಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ನಿರ್ದೇಶಕ ಆದಿತ್ಯ ಧರ್ ಅವರು ಈ ವಿಳಂಬಕ್ಕಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಮೆಯಾಚಿಸಿದರು. ‘ನಮ್ಮ ಚಿತ್ರ ಎಲ್ಲ ಭಾಷೆಗಳಲ್ಲಿ ಏಕಕಾಲಕ್ಕೆ ತೋರಿಸಬೇಕೆಂಬ ಆಸೆ ಇತ್ತು. ಆದರೆ ಅನಿವಾರ್ಯ ಕಾರಣಗಳಿಂದ ವಿಳಂಬವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವಿಳಂಬವಾದ ನಂತರ ಬಿಡುಗಡೆಯಾದರೂ ಕರ್ನಾಟಕದಲ್ಲಿ ‘ಧುರಂಧರ 2’ ಕನ್ನಡ ವರ್ಷನ್‌ಗೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಕನ್ನಡ ಆವೃತ್ತಿಯ ಪ್ರದರ್ಶನಗಳು ಹೌಸ್‌ಫುಲ್ ಆಗುತ್ತಿವೆ. ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸಂಜಯ್ ದತ್, ಅರ್ಜುನ್ ರಾಮ್ ಪಾಲ್, ರಣವೀರ್ ಸಿಂಗ್, ಸಾರಾ ಅರ್ಜುನ್, ಆರ್. ಮಾಧವನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ.

ಇದನ್ನೂ ಓದಿ: ‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಸಿನಿಮಾದ ಮೇಕಿಂಗ್ ಮತ್ತು ರಣವೀರ್ ಸಿಂಗ್ ಅವರ ಆ್ಯಕ್ಷನ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದರೆ, ಅನೇಕರಿಗೆ ಈ ಸಿನಿಮಾ ಇಷ್ಟ ಆಗಿಲ್ಲ. ಕನ್ನಡದ ಖ್ಯಾತ ನಟಿ ರಮ್ಯಾ ಅವರು ಈ ಸಿನಿಮಾವನ್ನು ಟೀಕಿಸಿದ್ದಾರೆ. ಪ್ರತಿಕ್ರಿಯೆ ನಡುವೆಯೂ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಚಿತ್ರವು ವಿಶ್ವದಾದ್ಯಂತ 600 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ದಾಖಲೆ ಬರೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *