
ಗದಗ, ಮಾರ್ಚ್ 24: ಈಗಾಗಲೇ ಸಮಾಜದಲ್ಲಿ ಜಾತಿಯಲ್ಲಿ ಮೇಲು ಕೀಳು ಭಾವನೆ ಜೀವಂತವಾಗಿದೆ ಎನ್ನುವುದಕ್ಕೆ ಹಲವು ಉದಾಹರಣೆಗಳು ಕಂಡು ಬಂದಿವೆ. ಈ ಹಿಂದೆಯೂ ಜಾತಿ ವಿಷಯಕ್ಕೆ, ಅಸ್ಪೃಶತೆಯ ವಿಚಾರಕ್ಕೆ ಸವರ್ಣೀಯರು ದಲಿತರನ್ನು ನಿಂದಿಸಿದ, ಅವರನ್ನು ಹೊಡೆದಾಟಕ್ಕಿಳಿದ (ಜಾತಿ ಸಂಘರ್ಷ) ನಿದರ್ಶನಗಳಿವೆ. ಆದರೆ ಎಸ್ಟಿಯವರ ಜಮೀನಿನಲ್ಲಿ ಎಸ್ಸಿ ಯುವಕ ನೀರು ಕುಡಿದು ಎಂಬ ವಿಚಾರಕ್ಕೆ ಮಾರಾಮಾರಿ ನಡೆದಿದ್ದು, 24 ಮಂದಿ ಘಟನೆ ಗದಗ (ಗದಗ) ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನಡೆದಿದೆ.
ಕೊಡ್ಲಿ, ಕಲ್ಲಿನಿಂದ ಹೊಡೆದುಕೊಂಡವರು ಜಿಮ್ಸ್ ಆಸ್ಪತ್ರೆಗೆ
ಎಸ್‌ಟಿ ಸಮುದಾಯದ ಜಮೀನಿನಲ್ಲಿ ಎಸ್‌ಸಿ ಸಮುದಾಯದ ಯುವಕ ನೀರು ಕುಡಿದ ವಿಚಾರಕ್ಕೆ ಎಡೆಮಾಡಿಕೊಟ್ಟ ವಾಗ್ವಾದ ತೀವ್ರಗೊಂಡು, ಎರಡೂ ಸಮುದಾಯಗಳ ನಡುವೆ ಹೊಡೆದಾಟ ನಡೆದಿದೆ. ಕೊಡ್ಲಿ, ಬಡಿಗೆ ಮತ್ತು ಕಲ್ಲುಗಳ ಮೇಲೆ ಒಬ್ಬರ ಮೇಲೊಬ್ಬರು ನಡೆಸಿದ ದಾಳಿಯಲ್ಲಿ ಎಸ್‌ಸಿ ಸಮುದಾಯದ ಮಹಿಳೆಯರು ಸೇರಿ ಒಟ್ಟು 24 ಮಂದಿ, ಮೂವರ ತಲೆಗೆ ಗಂಭೀರ ಗಾಯಗಳಾಗಿದ್ದರು. ಹಲವರಿಗೆ ಕೈ-ಕಾಲು ಮುರಿದಿದ್ದು, ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿತ್ತು. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂರು ವಾರ್ಡ್‌ಗಳಿಗೆ ಪೊಲೀಸರು ಕಟ್ಟು ನಿಟ್ಟಿನ ಭದ್ರತೆ ಒದಗಿಸಿದ್ದಾರೆ.
ಇದನ್ನೂ ಓದಿ ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್
ಗಲಾಟೆಗೆ ಹಳೆಯ ವೈಷಮ್ಯವೂ ಕಾರಣವಿರಬಹುದೇ?
ಇನ್ನೊಂದೆಡೆ, ಎಸ್ಟಿ ಸಮುದಾಯದ ಒಂಬತ್ತು ಮಂದಿ ರೋಗಿದ್ದು, ಮುಂಡರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಹಳೆಯ ವೈಷಮ್ಯವೂ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿದ ಎಸಿ ಗಂಗಪ್ಪ ಗಾಯಾಳುಗಳ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಶಾಂತಿ ಸಭೆ ನಡೆಸಲು ಮುಂದಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.