
ಬೆಂಗಳೂರು, ಮಾರ್ಚ್ 24: ಚಿನ್ನದ ದರದಲ್ಲಿ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನಾಭರಣ ಖರೀದಿಸುತ್ತಿದ್ದಾರೆ.
ಬೆಲೆ ಇಳಿಕೆಗೆ ಹಲವು ಮಹಿಳಾ ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ, ಮಧ್ಯಮ ವರ್ಗದ ಜನರಿಗೆ ಇದು ಚಿನ್ನವನ್ನು ಖರೀದಿಸುವ ಉತ್ತಮ ಅವಕಾಶವೆಂದು ಅಭಿಪ್ರಾಯಪಟ್ಟಿದ್ದಾರೆ. ಈ ಬೆಲೆ ಕುಸಿತಕ್ಕೆ ಜಾಗತಿಕ ಆರ್ಥಿಕ ಕಾರಣಗಳಿವೆ ಎಂದು ಅರ್ಥ ಡಾ. ಎಸ್.ಆರ್. ಕೇಶವ್ ತೋರಿಸಿದ್ದಾರೆ. USD ಡಾಲರು ಬಲವರ್ಧನೆ, ಅಮೆರಿಕಾದ ಫೆಡರಲ್ ರಿಸರ್ವ್ ಬಡ್ಡಿ ದರಗಳನ್ನು ಕಡಿಮೆ ಮಾಡದಿರುವ ನಿರ್ಧಾರ ಮತ್ತು ಗೋಲ್ಡ್ ಪೇಪರ್‌ಗಳಲ್ಲಿ ಹೂಡಿಕೆ ಮಾಡಿದವರು ಲಾಭ ಗಳಿಸಿ ವಿಥ್ ಡ್ರಾ ಮಾಡುತ್ತಿರುವುದು ಪ್ರಮುಖ ಕಾರಣ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕುಸಿತದ ಬಗ್ಗೆ ಹೆಚ್ಚು ಸ್ಪಷ್ಟವಾದ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ