Headlines

Bengaluru liquor ban ಬೆಂಗಳೂರಿನಲ್ಲಿ ಎರಡು ದಿನ ಮದ್ಯ ನಿಷೇಧ! ಪಬ್, ರೆಸ್ಟೋರೆಂಟ್, ಬಾರ್ ಎಲ್ಲೂ ಸಿಗಲ್ಲ ಎಣ್ಣೆ! | Liquor Sale Banned In Parts Of Bengaluru For Two Days Amid Protest Security Measures Gdp

Bengaluru liquor ban ಬೆಂಗಳೂರಿನಲ್ಲಿ ಎರಡು ದಿನ ಮದ್ಯ ನಿಷೇಧ! ಪಬ್, ರೆಸ್ಟೋರೆಂಟ್, ಬಾರ್ ಎಲ್ಲೂ ಸಿಗಲ್ಲ ಎಣ್ಣೆ! | Liquor Sale Banned In Parts Of Bengaluru For Two Days Amid Protest Security Measures Gdp



Bengaluru liquor ban ಬೆಂಗಳೂರಿನಲ್ಲಿ ಎರಡು ದಿನ ಮದ್ಯ ನಿಷೇಧ! ಪಬ್, ರೆಸ್ಟೋರೆಂಟ್, ಬಾರ್ ಎಲ್ಲೂ ಸಿಗಲ್ಲ ಎಣ್ಣೆ! | Liquor Sale Banned In Parts Of Bengaluru For Two Days Amid Protest Security Measures Gdp

ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಾಂತಿ ಕಾಪಾಡುವ ಉದ್ದೇಶದಿಂದ ಮಾರ್ಚ್ 24 ಮತ್ತು 25ರಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ನಗರದ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಯಲ್ಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗಳ ಹಿನ್ನೆಲೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಮಾರ್ಚ್ 24ರಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆಯಲಿದ್ದು, ನಾಳೆ ಅಂದರೆ ಮಾರ್ಚ್ 25ರಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದ ವತಿಯಿಂದ ಮತ್ತೊಂದು ಪ್ರತಿಭಟನೆ ನಡೆಯಲಿದೆ. ಪರಿಶಿಷ್ಟ ಜಾತಿಗಳಿಗೆ (SC) ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಈ ಪ್ರತಿಭಟನೆಗಳು ನಡೆಯುತ್ತಿದ್ದು, ಸಾವಿರಾರು ಮಂದಿ ಭಾಗವಹಿಸುವ ಸಾಧ್ಯತೆ ಇದೆ.

ರಾತ್ರಿ 10 ಗಂಟೆಯವರೆಗೆ ನಿಷೇಧ ಜಾರಿ

ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಮುಂದಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇಂದಿನ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10 ಗಂಟೆಯವರೆಗೆ ಈ ನಿಷೇಧ ಜಾರಿಯಲ್ಲಿರಲಿದೆ.

ನಗರದ ಒಟ್ಟು 8 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಆದೇಶ ಅನ್ವಯವಾಗಲಿದೆ. ಪಶ್ಚಿಮ ವಿಭಾಗದ ಉಪ್ಪಾರಪೇಟೆ (ಮೆಜೆಸ್ಟಿಕ್), ಸಿಟಿ ಮಾರ್ಕೆಟ್ (ಕೆಆರ್ ಮಾರುಕಟ್ಟೆ), ಕಾಟನ್‌ಪೇಟೆ, ಕಲಾಸಿಪಾಳ್ಯ ಹಾಗೂ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳು ಇದರೊಳಗೆ ಬರುತ್ತವೆ. ಹಾಗೆಯೇ ಕೇಂದ್ರ ವಿಭಾಗದ ಶೇಷಾದ್ರಿಪುರಂ, ಹೈಗ್ರೌಂಡ್ಸ್ ಮತ್ತು ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿಯೂ ಮದ್ಯ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಈ ಅವಧಿಯಲ್ಲಿ ಸಂಬಂಧಿತ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದಂಗಡಿಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಪಬ್‌ಗಳಲ್ಲಿ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಪೊಲೀಸರು ಮುನ್ನೆಚ್ಚರಿಕಾ ಕ್ರಮ

ಪೊಲೀಸ್ ಆಯುಕ್ತರ ಕಚೇರಿ ಮಾಹಿತಿ ಪ್ರಕಾರ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಪ್ರತಿಭಟನೆಗಳ ಸಮಯದಲ್ಲಿ ಮದ್ಯ ಸೇವನೆಯಿಂದ ಉಂಟಾಗಬಹುದಾದ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಅಡಚಣೆಗಳನ್ನು ತಪ್ಪಿಸುವುದು ಈ ನಿರ್ಧಾರದ ಮುಖ್ಯ ಉದ್ದೇಶವಾಗಿದೆ.

ಇದೇ ಸಂದರ್ಭದಲ್ಲಿ, ಮೆಜೆಸ್ಟಿಕ್, ಫ್ರೀಡಂ ಪಾರ್ಕ್ ಹಾಗೂ ನಗರ ರೈಲ್ವೆ ನಿಲ್ದಾಣ ಸುತ್ತಮುತ್ತ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.

ಒಟ್ಟಾರೆ, ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯುವಂತೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಬೆಂಗಳೂರು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.



Source link

Leave a Reply

Your email address will not be published. Required fields are marked *