Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್

Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಅಲರ್ಟ್


Karnataka Rain: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಮಾರ್ಚ್ 24: ಕರ್ನಾಟಕದಲ್ಲಿ ಮುಂದಿನ 3 ಗಂಟೆಯಲ್ಲಿ ಮಳೆಯಾಗುವ (ಮಳೆ) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆ ಮೂಲಕ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. ಜೊತೆಗೆ ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯಲ್ಲೋ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತ ಬೆಂಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇಲ್ಲದಿದ್ದರೂ, ಹೆಚ್ಚುತ್ತಿರುವ ಬಿಸಿಗಾಳಿಯಿಂದ ತಾತ್ಕಾಲಿಕ ಪರಿಹಾರ ಸಿಗಲಿದೆ. ಇತ್ತೀಚಿಗೆ ತಾಪಮಾನ ಹೆಚ್ಚುತ್ತಿದೆ. ಜೊತೆಗೆ ನಗರದ ಕೆಲವೆಡೆ ಮೋಡ ಕವಿದ ವಾತಾವರಣ.

ಬಿರುಗಾಳಿ ಸಹಿತ ಮಳೆ: ಮನೆಗಳಿಗೆ ನುಗ್ಗಿದ ನೀರು

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿದೆ. ಇತ್ತ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ರಸ್ತೆಗಳು ನದಿಯಂತಿದ್ದರೆ, ಬೇಸ್ಮೆಂಟ್ ನಲ್ಲಿ ನಿಲ್ಲಿಸಿದ್ದ ಕಾರುಗಳು, ಬೈಕ್ ಗಳು ಮುಳುಗಡೆ ಆಗಿವೆ. ಸದಾಶಿವನಗರ, ನೆಹರುನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮೊದಲು ರಸ್ತೆಗಳ ಮೇಲೆ ಚರಂಡಿ ನೀರು ಉಕ್ಕಿಹರಿದಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ ಸೇರಿದಂತೆ ರಾಜ್ಯದೆಲ್ಲೆಡೆ ಇಂದು ವರುಣಾರ್ಭಟ ಸಾಧ್ಯತೆ! 17 ಜಿಲ್ಲೆಗಳಿಗೆ ಎಲ್ಲೋ ಎಚ್ಚರಿಕೆ

ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಲ್ಲೇ ಸವಾರರು ವಾಹನ ಸಂಚಾರ ಮಾಡುತ್ತಿದ್ದಾರೆ. ಸದ್ಯ ಜೆಸಿಬಿ ಮೂಲಕ ನೀರು ಸ್ಥಳೀಯರಿಂದ ವ್ಯವಸ್ಥೆ ಮಾಡಲಾಗಿದೆ. ಸೂಕ್ತ ವ್ಯವಸ್ಥೆ ಮಾಡದ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಬೆಳಗಾವಿ ಜನತೆ ಹಿಡಿಶಾಪ ಹಾಕಿದ್ದಾರೆ.

ಬಿರುಗಾಳಿ ಸಮೇತ ಮಳೆ: ಕೊಚ್ಚಿಹೋದ ತರಕಾರಿ

ಹಾವೇರಿ ಜಿಲ್ಲೆಯ ಹಲವೆಡೆಗಳಲ್ಲಿ ಬಿರುಗಾಳಿ ಸಮೇತ ಮಳೆ ಸುರಿದಿದೆ. ಧಾರಕಾರ ಮಳೆಗೆ ಸಂತೆಯಲ್ಲಿದ್ದ ತರಕಾರಿ ಕೊಚ್ಚಿಕೊಂಡು ಹೋಗಿದೆ. ಬದನೆಕಾಯಿ, ಟೊಮ್ಯಾಟೊ, ಆಲೂಗಡ್ಡೆ ಸೇರಿದಂತೆ ಹಲವು ತರಕಾರಿ ನೀರಿನಲ್ಲಿ ಜಲಾವೃತವಾಗಿದೆ. ಇನ್ನು ಸಂತೆಗೆ ಬಂದ ಜನರು ಮನೆಗೆ ತೆರಳಲು ಪರದಾಡಿದ್ದಾರೆ. ಅಕಾಲಿಕ ಮಳೆಗೆ ಜನರು ಹೈರಾಣಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *