Headlines

ಅದಾನಿ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ 850 ಕೋಟಿ ಹಣ ಬಾಕಿ!

ಅದಾನಿ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ 850 ಕೋಟಿ ಹಣ ಬಾಕಿ!

ಅದಾನಿ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ 850 ಕೋಟಿ ಹಣ ಬಾಕಿ!

ಕಲಬುರಗಿ ಜಿಲ್ಲೆಯಲ್ಲಿ ಸುಣ್ಣದ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಅದಾನಿ ಸಮೂಹದ ಎಸಿಸಿ ಕಂಪನಿಯು ಸರ್ಕಾರಕ್ಕೆ ₹850 ಕೋಟಿ ರಾಜಧನ ಮತ್ತು ದಂಡವನ್ನು ಬಾಕಿ ಉಳಿಸಿಕೊಂಡಿದೆ. ಈ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿದ್ದರೂ, ಬಾಕಿ ವಸೂಲಿಗಾಗಿ ಕ್ರಿಮಿನಲ್ ಮೊಕದ್ದಮೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಕಲಬುರಗಿ ಜಿಲ್ಲೆಯ ವಾಡಿ ಬಳಿಯ ಕಣ್ಣೂರು ಲೈಮ್‌ಸ್ಟೋನ್ ಬ್ಲಾಕ್ ಗುತ್ತಿಗೆ ಪಡೆದಿರುವ ಅದಾನಿ ಸಮೂಹದ ಎಸಿಸಿ ಕಂಪನಿಯು, ರಾಜಧನ ಹಾಗೂ ದಂಡದ ಮೊತ್ತ ಸೇರಿ ಒಟ್ಟು 850 ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸಬೇಕಿದೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಆರತಿ ಕೃಷ್ಣ ಅವರು ಕೇಳಿದ ಪ್ರಶ್ನೆಗೆ ಗಣಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರ ಅನುಪಸ್ಥಿತಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉತ್ತರಿಸಿದರು.

ಜಿಲ್ಲೆಯ ಇಂಗಳಗಿ ಮತ್ತು ರಾವೂರ ಗ್ರಾಮಗಳ ವ್ಯಾಪ್ತಿಯಲ್ಲಿ 471.03 ಹೆಕ್ಟೇರ್ ಪ್ರದೇಶದಲ್ಲಿ ಸುಣ್ಣದ ಕಲ್ಲಿನ ಗಣಿಗಾರಿಕೆಗೆ ಈ ಕಂಪನಿಗೆ ಅವಕಾಶ ನೀಡಲಾಗಿತ್ತು. ಈ ವರ್ಷದ ಜನವರಿಯಲ್ಲಿಯೇ ಗುತ್ತಿಗೆ ಅವಧಿ ಮುಗಿದಿದ್ದರೂ, ಹೊಸದಾಗಿ ಗಣಿಗಾರಿಕೆಗೆ ಅನುಮತಿ ನೀಡಿಲ್ಲ.

ರಾಜಧನ ಮತ್ತು ದಂಡದ ಮೊತ್ತವನ್ನು ಪ್ರಶ್ನಿಸಿ ಕಂಪನಿಯು ಕಾನೂನು ಹೋರಾಟ ನಡೆಸುತ್ತಿದ್ದು, ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಹಣ ಪಾವತಿಯ ಮೊತ್ತ ಇನ್ನೂ ಇತ್ಯರ್ಥವಾಗದ ಕಾರಣ, ನ್ಯಾಯಾಲಯದ ಅನುಮತಿಯ ಮೇರೆಗೆ ಸದ್ಯ ಗಣಿಗಾರಿಕೆ ಮುಂದುವರಿದಿದೆ.

"ಅದಾನಿ ಅವರನ್ನು ಮೋದಿಯವರ ಸ್ನೇಹಿತ ಎಂದು ಟೀಕಿಸುವ ಕಾಂಗ್ರೆಸ್ ಸರ್ಕಾರ, ಇಷ್ಟೊಂದು ದೊಡ್ಡ ಮೊತ್ತ ಬಾಕಿ ಇದ್ದರೂ ಗಣಿಗಾರಿಕೆಗೆ ಅವಕಾಶ ನೀಡಿರುವುದರ ಹಿಂದಿನ ಹಿತಾಸಕ್ತಿ ಏನು?" ಎಂದು ಬಿಜೆಪಿಯ ಸಿ.ಟಿ. ರವಿ ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ಕೆ. ಶಿವಕುಮಾರ್ ಕೂಡ ಬಾಕಿ ವಸೂಲಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಅದಾನಿ ಸೇರಿದಂತೆ ಯಾರೇ ಆದರೂ ಸರ್ಕಾರ ಮುಲಾಜಿಗೆ ಒಳಗಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಈ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅಡ್ವಕೇಟ್ ಜನರಲ್ ಸಲಹೆ ನೀಡಿದ್ದಾರೆ. ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Source link

Leave a Reply

Your email address will not be published. Required fields are marked *