Headlines

MNREGA: ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ, ಸಿಎಜಿ ವರದಿಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ

MNREGA: ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ, ಸಿಎಜಿ ವರದಿಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ


MNREGA: ಕರ್ನಾಟಕ ನರೇಗಾದಲ್ಲಿ ಭಾರಿ ಅಕ್ರಮ, ಸಿಎಜಿ ವರದಿಯಲ್ಲಿ ಬಯಲಾಯ್ತು ಸ್ಫೋಟಕ ವಿಚಾರ

ಬೆಂಗಳೂರು, ಮಾರ್ಚ್ 25: ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಮಂಡನೆಯಾದ ಮಹಾಲೇಖಾಪರಿಶೋಧಕರ (ಸಿಎಜಿ) ವರದಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ನಡೆದಿವೆ. ವರದಿ ಪ್ರಕಾರ, ಯಾವುದೇ ಯೋಜನೆಯಿಲ್ಲದ ಮನೆ ಕಾಮಗಾರಿಗಳಿಗೆ ಮತ್ತೆ ಹಣ ಪಾವತಿ ಮಾಡಿರುವುದು, ಅರ್ಹತೆಯಿಲ್ಲದವರಿಗೆ ಹಣ ನೀಡಿರುವುದು ಹಾಗೂ ಕಾರ್ಮಿಕರಿಗೆ ವೇತನ ನೀಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಕೆಲಸವೇ ಇಲ್ಲದೆ ವೇತನ!

ಕೆಲವು ಸ್ಥಳಗಳಲ್ಲಿ ನಿರ್ಮಾಣ ಕಾರ್ಯವೇ ನಡೆದರೂ ಕಾರ್ಮಿಕರಿಗೆ ವೇತನ ನೀಡಲಾಗಿದೆ. ಜೊತೆಗೆ, ನಿಯಮಿತಗಿಂತ ಹೆಚ್ಚು ಹಣ ನೀಡಿರುವುದೂ ವರದಿಯಲ್ಲಿ ಉಲ್ಲೇಖವಾಗಿದೆ. ಹೆಚ್ಚಿನ ಕೆಲಸದ ಸ್ಥಳಗಳಲ್ಲಿ ಕುಡಿಯುವ ನೀರು, ವೈದ್ಯಕೀಯ ನೆರವು ಮತ್ತು ಮಕ್ಕಳ ಆರೋಗ್ಯ ಸೌಲಭ್ಯಗಳ ಕೊರತೆಯಿಂದ ಮಹಿಳೆಯರು ವೃದ್ಧರು ಕೆಲಸಕ್ಕೆ ಹಾಜರಾಗಲು ಹಿಂಜರಿಯುವುದು ವರದಿಯಾಗಿದೆ.

ಅರ್ಧದಲ್ಲೇ ಸ್ಥಗಿತಗೊಂಡ ಯೋಜನೆಗಳು

ನರೇಗಾ ಅಡಿ ಅಂಗೀಕೃತ ಯೋಜನೆಗಳಲ್ಲಿ ಬಹಳಷ್ಟು ಪ್ರಾರಂಭದಲ್ಲಿಯೇ ಉಳಿದಿದ್ದರೆ, ಕೆಲವು ಯೋಜನೆಗಳು ಒಂದು ವರ್ಷಕ್ಕೂ ಹೆಚ್ಚು ಕಾಲ ಪೂರ್ಣಗೊಳ್ಳದೇ ಉಳಿದಿವೆ ಎಂದು ವರದಿಯಾಗಿದೆ.

ಹಾಜರಾತಿಯಲ್ಲಿ ಭಾರಿ ಗೋಲ್ಮಾಲ್

50 ಪ್ರಕರಣಗಳಲ್ಲಿ ಕಾರ್ಮಿಕರ ಹಾಜರಾತಿ ಗುರುತು ಹಾಕದೇ, ಸಹಿ ಅಥವಾ ಬೆರಳಚ್ಚು ಪಡೆಯದೇ ಇದ್ದರೂ, ಸುಮಾರು 5.51 ಲಕ್ಷ ರೂ. ವೇತನ ಇಲ್ಲದಿರುವುದು.

ಕೆಲಸ ಮಾಡಿದವರಿಗೆ ವೇತನವಿಲ್ಲ!

ಇನ್ನೊಂದೆಡೆ, 13 ಗ್ರಾಮ ಪಂಚಾಯಿತಿಗಳಲ್ಲಿ 17 ಕಾಮಗಾರಿಗಳಲ್ಲಿ ತೊಡಗಿದ್ದ 497 ಕಾರ್ಮಿಕರು, ಎಲ್ಲ ದಾಖಲೆಗಳನ್ನು ಸಲ್ಲಿಸಿದರೂ 10.98 ಲಕ್ಷ ರೂ. ವೇತನ ಪಾವತಿಸದೇ ಇರುವುದಾಗಿ ಸಿಎಜಿ ವರದಿ ಇದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ತಾಂತ್ರಿಕ ರಚನೆಯ ಕಾರಣ ಅಸಂಬದ್ಧ ಅಂದಾಜುಗಳು, ಕಾಮಗಾರಿಗಳ ಅಸಮರ್ಪಕ ಅನುಷ್ಠಾನ ಮತ್ತು ಅನಿಯಮಿತ ವೆಚ್ಚಗಳು ಗಮನಕ್ಕೆ ಬಂದಿದೆ.

ಕೆಲವು ಕಾಮಗಾರಿಗಳ ಅಂದಾಜು ಪರಿಷ್ಕರಣೆ ಮಾಡದೇ ಹೆಚ್ಚುವರಿ ವೆಚ್ಚ ಮಾಡಲಾಗಿದೆ. ಜೊತೆಗೆ, ವೈಯಕ್ತಿಕ ಕಾಮಗಾರಿಗಳ ವಸ್ತುಗಳ ವೆಚ್ಚವನ್ನು ಲಾಭಾರ್ಥಿಗಳಿಗೆ ನೀಡಬೇಕಾದಲ್ಲಿ ನೇರವಾಗಿ ಮಾರಾಟಗಾರರಿಗೆ ನೀಡಲಾಗಿರುವುದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸಿಎಜಿ ವರದಿ ಮಾಡಿದೆ.

ಇದನ್ನೂ ಓದಿ: ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ

ಒಟ್ಟಿನಲ್ಲಿ, ಗ್ರಾಮೀಣ ಉದ್ಯೋಗ ಸೃಷ್ಟಿ ಹಾಗೂ ಬಡಜನರ ಆರ್ಥಿಕ ಭದ್ರತೆಯನ್ನು ಗುರಿಯಾಗಿಟ್ಟುಕೊಂಡು ಎಂನರೇಗಾ ಯೋಜನೆಯಲ್ಲಿ ಇಂತಹ ಅಕ್ರಮಗಳು ನಡೆದಿರುವುದು ಆತಂಕಕಾರಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಆಗ್ರಹವಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *