Headlines

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!


ಕಾಂಗ್ರೆಸ್ ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗು!

ದಾವಣಗೆರೆ, ಮಾರ್ಚ್ 25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿರುವ ಕಾಂಗ್ರೆಸ್ ವಿರುದ್ಧ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಮುಸ್ಲಿಂ ಹಾಗೂ ಅಹಿಂದ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 9ರಂದು ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಸಾದಿಕ್ ಪೈಲ್ವಾನ್, ‘ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಹಿಂದ ಶಕ್ತಿ ಪ್ರದರ್ಶನವಾಗಬೇಕು. ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಮತ್ತು ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನಾನು ಕಣಕ್ಕಿಳಿದಿದ್ದೇನೆ’ ಎಂದು ಹೇಳಿದರು. ಜನರು ಬದಲಾವಣೆ ಬಯಸುತ್ತಿದ್ದಾರೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಬಳಸುತ್ತಿದ್ದೇನೆ. ಯಾವ ಒತ್ತಡಕ್ಕೂ ತಲೆಬಾಗುವುದಿಲ್ಲ ಎಂದು ಹೇಳಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *