
ದಳಪತಿ ವಿಜಯ್ ಕೊನೆಯ ಸಿನಿಮಾ ಎನ್ನಲಾಗಿದ್ದ ‘ಜನ ನಾಯಕನ್’ ರಿಲೀಸ್ ಗೆ ಅಭಿಮಾನಿಗಳು ಕಾದಿದ್ದರು. ಆದರೆ, ಸಿನಿಮಾ ಸದ್ಯಕ್ಕಂತೂ ರಿಲೀಸ್ ಆಗೋದು ಅನುಮಾನವೇ. ಸದ್ಯ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಬ್ಯೂಸಿ ಇದ್ದಾರೆ. ಅವರು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರ ಸಿನಿಮಾ ಭವಿಷ್ಯ ಈಗ ಮುಗಿದಿಲ್ಲ ಎಂದು ಹೇಳಲಾಗುತ್ತಾ ಇದೆ. ಚುನಾವಣೆ ಫಲಿತಾಂಶ ಎಲ್ಲವೂ ನಿರ್ಧಾರವಾಗಲಿದೆ.
ವಿಜಯ್ ಅವರು ರಾಜಕೀಯಕ್ಕೆ ಕಾಲಿಡಬೇಕು ಎಂದು ನಿರ್ಧರಿಸಲಾಗಿದೆ. ಟಿವಿ ಹೆಸರಿನ ಪಕ್ಷ ಸ್ಥಾಪಿಸಿ ಸ್ಪರ್ಧೆಯಲ್ಲಿದೆ. ಅವರ ಪಕ್ಷ ತಮಿಳುನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುವುದು, ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವ ಗುರಿ ಹೊಂದಿದೆ. ದಳಪತಿ ವಿಜಯ್ ಗೆ ರಾಜಕೀಯ ಹೊಸದು. ಅವರು ತಮ್ಮ ಜನಪ್ರಿಯತೆಯನ್ನು ಬಳಸಿ ಮೊದಲ ಚುನಾವಣೆಯಲ್ಲೇ ಗೆದ್ದೇ ಬಿಡುತ್ತಾರೆ ಎಂದು ಹೇಳೋದು ಕಷ್ಟ.
ಒಂದೊಮ್ಮೆ ಟಿವಿ ಪಕ್ಷ ಚುನಾವಣೆಯಲ್ಲಿ ಬಹುಮತ ಪಡೆದರೆ ವಿಜಯ್ ತಮಿಳುನಾಡು ಸಿಎಂ ಆಗಲಿದ್ದಾರೆ. ಒಂದೊಮ್ಮೆ ರಾಜಕೀಯ ಕೈ ಹಿಡಿಯದೇ ಇದ್ದರೆ ಮುಂದಿನ ಐದು ವರ್ಷಗಳ ಕಾಲ ಅವರು ವರ್ಷಕ್ಕೆ ಎರಡು ಸಿನಿಮಾಗಳನ್ನು ಮಾಡುವ ಗುರಿ ಹೊಂದಿದ್ದಾರೆ. ಈ ವೇಳೆ ಅವರು ಹಿಂಬದಿಯಲ್ಲಿ ಪಕ್ಷ ಬೆಳೆಸುವ ಕಾರ್ಯವನ್ನೂ ಮಾಡಲಿದ್ದಾರೆ.
ಇದನ್ನೂ ಓದಿ: ಇಫ್ತಾರ್ ಕೂಟದಲ್ಲಿ ಭಾಗಿ ಆದ ದಳಪತಿ ವಿಜಯ್; ವಿವಾದದಿಂದ ತಪ್ಪಿಸಿಕೊಳ್ಳಲು ಹೊಸ ಐಡಿಯಾ
ಅಟ್ಲಿ ಅವರು ಸದ್ಯ ಅಲ್ಲು ಅರ್ಜುನ್ ಸಿನಿಮಾದ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಒಂದೊಮ್ಮೆ ವಿಜಯ್ ರಾಜಕೀಯ ಭವಿಷ್ಯ ಅತಂತ್ರವಾದರೆ ಅಟ್ಲಿ ಜೊತೆ ವಿಜಯ್ ಸಿನಿಮಾ ಮಾಡುವ ಸಾಧ್ಯತೆ ಇದೆಯಂತೆ. ರಾಜಕೀಯದಲ್ಲಿ ಯಶಸ್ಸು ಸಿಗದೆ ಇದ್ದರೆ ಅಕ್ಟೋಬರ್ ಅಲ್ಲಿ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.
ವಿಜಯ್ ಅವರು ಟಿವಿಕೆ ಪಕ್ಷ ಕಟ್ಟಿ ಅದನ್ನು ಬೆಳೆಸುತ್ತಿದ್ದಾರೆ. ಕರೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಹಿನ್ನಡೆ ಉಂಟು ಮಾಡಿದೆ. ಈ ಪ್ರಕರಣದಲ್ಲಿ ಅವರು ಇನ್ನೂ ತನಿಖೆ ಎದುರಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.