
ಬೆಂಗಳೂರು, ಮಾರ್ಚ್ 25: ಶ್ರೀರಾಮನವಮಿ ಹಬ್ಬದ ಅಂಗವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಸಾರ್ವಜನಿಕ ಸೂಚನೆಯನ್ನು ಹೊರಡಿಸಿದೆ. ಮಾರ್ಚ್ 27, ಶುಕ್ರವಾರದಂದು ನಗರದಾದ್ಯಂತ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಪ್ರಾಧಿಕಾರದ ಪಶುಸಂಗೋಪನಾ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ಜಿಬಿಎ ಹೊರಡಿಸಿದ ಆದೇಶವೇನಿದೆ?
ಎಲ್ಲಾ ಕಸಾಯಿಖಾನೆಗಳನ್ನು ಆ ದಿನ ಮುಚ್ಚುವಂತೆ ಜಿಬಿಎ ಆದೇಶ ಹೊರಡಿಸಿದೆ, ಮಾಂಸ ಮಾರಾಟ ಮಾಡುವ ಅಂಗಡಿಗಳು ಮತ್ತು ಔಟ್‌ಲೆಟ್‌ಗಳಲ್ಲಿ ಯಾವುದೇ ರೀತಿಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ನಗರ ವ್ಯಾಪ್ತಿಯಲ್ಲಿರುವ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಈ ಕಡ್ಡಾಯವಾಗಿ ಪಾಲಿಸಬೇಕು ಎಂದು ಎಲ್ಲಾ ನಿಯಮಗಳು.
ಜಿಬಿಎ ಆದೇಶ
ನಿಯಮ ಉಲ್ಲಂಘಿಸಿದರೆ ಕ್ರಮ!
ಹಬ್ಬದ ದಿನದ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗಳನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಚ್ಚರಿಕೆ ಸೂಚಿಸಲಾಗಿದೆ.ನಗರದಲ್ಲಿ ಯಾವುದೇ ರೀತಿಯ ಅಸಭ್ಯತೆ ಅಥವಾ ಅಕ್ರಮ ನಡೆಯದಂತೆ ನಿಗಾ ವಹಿಸಲಾಗುತ್ತಿದೆ. ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಸಹಕರಿಸಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.