
ನವದೆಹಲಿ, ಮಾರ್ಚ್ 25: ಎಲ್ಪಿಜಿ ಪೂರೈಕೆಯಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಈಗ ಭಾರತದಲ್ಲಿ ಪರ್ಯಾಯ ವ್ಯವಸ್ಥೆಗೆ ಅನಿವಾರ್ಯವಾಗಿಸಿದೆ. ಸರ್ಕಾರವು ನೈಸರ್ಗಿಕ ಅನಿಲ (ನೈಸರ್ಗಿಕ ಅನಿಲ) ಸೌಕರ್ಯಗಳಾದ ಪಿಎನ್ಜಿ ಮತ್ತು ಸಿಎನ್ಜಿ ಲಭ್ಯತೆಗಾಗಿ ಇನ್ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಬೇಕಾದ ಸುಧಾರಣೆಗಳನ್ನು ತರುತ್ತಿದೆ. ಪಿಎನ್ಜಿ ಸೌಕರ್ಯವನ್ನು ವೇಗವಾಗಿ ಹೆಚ್ಚಿಸಲು ಈ ಸುಧಾರಣೆ ತರಲಾಗಿದೆ. ಈ ಸಂಬಂಧ ಸರ್ಕಾರವು ನೈಸರ್ಗಿಕ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ವಿತರಣೆ ಆದೇಶ 2026 ಅನ್ನು ಹೊರಡಿಸಲಾಗಿದೆ.
ವಿವಿಧ ಪ್ರದೇಶಗಳಿಗೆ ನ್ಯಾಚುರಲ್ ಗ್ಯಾಸ್ ಪೈಪ್ಲೈನ್ ಹಾಕಲು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟರ್ಗಳಿಗೆ ಅನೇಕ ತಡೆಗಳು, ಸಮಸ್ಯೆಗಳಿವೆ. ಭೂಮಿ ಸಿಗದೇ ಇರುವುದು, ಅನುಮೋದನೆ ದೊರೆಯುವುದು, ಅಧಿಕ ಶುಲ್ಕ ಇರುವುದು ಇತ್ಯಾದಿ ತಡೆಗಳನ್ನು ನಿವಾರಿಸಿ, ನ್ಯಾಚುರಲ್ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಗೆ ಪೈಪ್ಲೈನ್ ಅಳವಡಿಸುವ ಕಾರ್ಯಗಳನ್ನು ಸುಗಮಗೊಳಿಸಲು ಸರ್ಕಾರವು ಏಕರೀತಿಯ ಒಂದು ಫ್ರೇಮ್ವರ್ಕ್ ಅನ್ನು ರೂಪಿಸುವುದು ಅಗತ್ಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯವು ಪತ್ರಿಕಾ ಪ್ರಕಟಣೆಯಲ್ಲಿದೆ.
ಇದನ್ನೂ ಓದಿ: ರಷ್ಯಾದಿಂದ 60 ಮಿಲಿಯನ್ ಬ್ಯಾರಲ್ ಕಚ್ಛಾ ತೈಲ ಖರೀದಿಸಿದ ಭಾರತ
ಎಲ್ಪಿಜಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯವನ್ನು ಸರಿದೂಗಿಸಲು ಸರ್ಕಾರವು ನೈಸರ್ಗಿಕ ಅನಿಲದತ್ತ ಗಮನ ಹರಿಸಿದೆ. ನ್ಯಾಚುರಲ್ ಗ್ಯಾಸ್ಗೆ ಭಾರತವು ಗಲ್ಫ್ ರಾಷ್ಟ್ರಗಳ ಮೇಲೆ ಅವಲಂಬನೆ ಕಡಿಮೆಯಾಗಿದೆ. ಹೀಗಾಗಿ, ಎಲ್ಪಿಜಿಗೆ ಎಲ್ಎನ್ಜಿ ಮತ್ತು ಪಿಎನ್ಜಿ ಪೂರೈಕೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಆದರೆ, ಪಿಎನ್ ಜಿ ಅಥವಾ ಪೈಪ್ಡ್ ಗ್ಯಾಸ್ ನೆಟ್ವರ್ಕ್ ಸಾಕಷ್ಟು ಮಟ್ಟದಲ್ಲಿ ಲಭ್ಯವಿಲ್ಲದಿರುವುದು ಪ್ರಮುಖ ಹಿನ್ನಡೆಯಾಗಿದೆ.
ಭಾರತದಲ್ಲಿ ಒಂದೂವರೆ ಕೋಟಿಗೂ ಹೆಚ್ಚು ಮನೆಗಳಿಗೆ ಪಿಎನ್ ಜಿ ಕನೆಕ್ಷನ್ ಇದೆ. ಹೆಚ್ಚಿನ ನಗರಗಳಲ್ಲಿ ಪಿಜಿ ಪೂರೈಕೆಯಾದರೂ ವ್ಯಾಪಕವಾಗಿ ಪೈಪ್ಲೈನ್ ಲಭ್ಯವಿಲ್ಲ. ಬೆಂಗಳೂರಿನಲ್ಲಿ ಕೆಲವು ಪ್ರದೇಶಗಳಲ್ಲಿ ಪೈಪ್ಲೈನ್ ಇದ್ದರೆ, ಮತ್ತಷ್ಟು ಪ್ರದೇಶಗಳಲ್ಲಿ ಅಳವಡಿಕೆಯೇ ಆಗಿಲ್ಲ. ಹೀಗಾಗಿ, ಹೆಚ್ಚಿನ ಮನೆಗಳಿಗೆ ಸಂಪರ್ಕವೇ ಲಭ್ಯವಿಲ್ಲ. ಈ ಸಮಸ್ಯೆಯನ್ನು ನೀಗಿಸಲು ಸರ್ಕಾರ ಈ ಹೊಸ ಆದೇಶವನ್ನು ಹೊರಡಿಸಿದೆ.
ಇದನ್ನೂ ಓದಿ: ಪೆಟ್ರೋಲ್, ಡೀಸಲ್ ಕೊರತೆ ಇಲ್ಲ, ಗಾಬರಿ ಬೇಡ: ಪೆಟ್ರೋಲಿಯಂ ಕಂಪನಿಗಳಿಂದ ಸ್ಪಷ್ಟನೆ
ಈ ಆದೇಶವು ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಟಿಂಗ್ ಸಂಸ್ಥೆಗಳಿಗೆ ಹೆಚ್ಚಿನ ಶಕ್ತಿ ಸಿಗಲಿದೆ. ತ್ವರಿತವಾಗಿ ಪೈಪ್ಲೈನ್ಗಳನ್ನು ಅಳವಡಿಸಲು ಸಾಧ್ಯವಿದೆ. ಈ ಜನರನ್ನು ಎಲ್ಪಿಜಿಯಿಂದ ಪಿನ್ಜಿ ಸಂಪರ್ಕಕ್ಕೆ ಬದಲಾಯಿಸುವುದು ಸುಲಭ. ಎಲ್ಪಿಜಿ ತಂದಿರುವ ಬಿಕ್ಕಟ್ಟು ಈಗ ಪಿಎನ್ ಜಿ ಸೌಕರ್ಯಕ್ಕೆ ಅನುಕೂಲ ಮಾಡಿಕೊಟ್ಟಿದೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ