
ಬೆಂಗಳೂರು, ಮಾ.25: ಪಬ್ ಮತ್ತು ಬ್ರೀವರಿಗಳಲ್ಲಿ ಅಪ್ರಾಪ್ತರು ಮದ್ಯಪಾನ ಮಾಡುವ ಪ್ರವೃತ್ತಿಗೆ ಕರ್ನಾಟಕ ಗಂಭೀರ ಕಡಿವಾಣ ಹಾಕಿದೆ. ಅಪ್ರಾಪ್ತರನ್ನು ಮದ್ಯಪಾನದ ವ್ಯಸನದಿಂದ ರಕ್ಷಿಸುವುದು ಆಡಳಿತ ಮಂಡಳಿಯ ನೈತಿಕ ಮತ್ತು ಶಾಸನಾತ್ಮಕ ಕರ್ತವ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬ್ರೀವರಿಗಳಿಗೆ ಗ್ರಾಹಕರು ಪ್ರವೇಶಿಸುವಾಗಲೇ ಅವರ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಮದ್ಯ ಸರಬರಾಜು ಮಾಡುವ ಸಂದರ್ಭದಲ್ಲೂ ಸಿಬ್ಬಂದಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸ್ಥಾಪಿಸಿದೆ.
“ಅಪ್ರಾಪ್ತರಿಗೆ ಮದ್ಯ ನೀಡಲಾಗುವುದಿಲ್ಲ” ಎಂಬ ಎಚ್ಚರಿಕೆ ಫಲಕಗಳನ್ನು ಎಲ್ಲಾ ಬ್ರೀವರಿಯಲ್ಲಿ ಎದ್ದು ಕಾಣುವಂತೆ ಹಾಕಬೇಕು. ಅಪ್ರಾಪ್ತರು ಬ್ರೀವರಿಗಳ ಒಳಗೆ ಕದ್ದುಮುಚ್ಚಿಪಾನ ಮಾಡಿದರೂ ಸಹ, ಅದಕ್ಕೆ ಅಲ್ಲಿನ ಆಡಳಿತ ಮಂಡಳಿಯೇ ಸಂಪೂರ್ಣ ಹೊಣೆಯಾಗಿದೆ. ಈ ಜವಾಬ್ದಾರಿಯಿಂದ ಒಳಗೊಳ್ಳಲು ಸಾಧ್ಯವಿಲ್ಲ.
ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಮಾನಸಿಕ ತಪಾಸಣೆ ಮಾಡಿಸಿ, ಚುನಾವಣಾ ಆಯೋಗಕ್ಕೆ ಮನವಿ
ರಾಜರಾಜೇಶ್ವರಿ ನಗರದ ಬ್ರೀವರಿ ಮಾಲೀಕ ವಿ. ಚಿಟ್ಟಿಬಾಬು ವಿರುದ್ಧ ಅಪ್ರಾಪ್ತರಿಗೆ ಮದ್ಯ ಸರಬರಾಜು ಮಾಡಿದ ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಲಾಗಿದೆ. ಮದ್ಯಪಾನದಿಂದ ಅಪ್ರಾಪ್ತರನ್ನು ಕಾಪಾಡುವುದು ಸಮಾಜದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ