
ಬೆಂಗಳೂರು, ಮಾರ್ಚ್ 26: ಆರ್ಸಿಬಿ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವೆ ಐಪಿಎಲ್ ಪಂದ್ಯಕ್ಕೆ ಕೇವಲ ಎರಡು ದಿನ ಬಾಕಿ ಇರುವಾಗ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆಗಳು ಬಿರುಸಿನಿಂದ ನಡೆದಿವೆ. 500 ಹೆಚ್ಚು ಭದ್ರತಾ ಸಿಬ್ಬಂದಿಯಿಂದ ಪ್ರಮುಖ ಮ್ಯಾಕ್ ಡ್ರಿಲ್ ನಡೆಸಲಾಯಿತು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಪೊಲೀಸ್ ಇಲಾಖೆಯು ಈ ಭದ್ರತಾ ಸಿದ್ಧತೆಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಜೂನ್ 4 ರಂದು ನಡೆದ ಕಾಲ್ತುಳಿತ ಪ್ರಕರಣದಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಈ ತಾಲೀಮಿನ ಮುಖ್ಯ ಉದ್ದೇಶವಾಗಿದೆ. ಸಿವಿಲ್ ಇಲಾಖೆಯು ಸಹ ಈ ಮ್ಯಾಕ್ ಡ್ರಿಲ್ನಲ್ಲಿ ಕಾಣಿಸಿಕೊಂಡಿದ್ದು, ಪ್ರಮುಖವಾಗಿ ತರಬೇತಿಯನ್ನು ನೀಡಿದೆ. ಫೈರ್ ಎಕ್ಸಿಟ್ ಬಾಗಿಲುಗಳ ಪರಿಶೀಲನೆ, ಗೇಟ್ ಅಗಲೀಕರಣದಂತಹ ಎಲ್ಲಾ ಅಗತ್ಯ ಕೆಲಸಗಳು ಸಂಪೂರ್ಣವಾಗಿ ಮುಗಿದಿವೆ.
ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.