
ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕ ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿಧ್ಯಾರ್ಥಿ ಅಬ್ಯುಲ್ ಕಾಲೇಜು ವಿದ್ಯಾರ್ಥಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ. ಈ ವೇಳೆ ಸಾರ್ವಜನಿಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪ್ರಾಧ್ಯಾಪಕನನ್ನು ವಜಾಗೊಳಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ