
ಆನೇಕಲ್, ಮಾರ್ಚ್ 26: ಬಾವನಿಂದ ಬಾಮೈದನ ಕೊಲೆ ನಡೆದಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್ನಿಂದ ರಂಜಿತ್ (24)ನ ಕೊಲೆ (ಕೊಲ್ಲಲು) ಮಾಡಲಾಗಿದೆ. ಆಸಾಮಿ ಕೊಲೆ ಮಾಡಿಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ರಂಜಿತ್ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್ ಜೊತೆಗೆ ರಂಜಿತ್ ಸಂಬಂಧ ಹೊಂದಿದ್ದ. ಕೋಮಲ್ ಅನ್ನು ಬೇರೊಬ್ಬರೊಂದಿಗೆ ಮದುವೆ ಮಾಡಿಕೊಡಲಾಯಿತು. ಆದರೆ ಗಂಡನನ್ನ ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.
ಇದನ್ನೂ ಓದಿ: ಅಕ್ರಮ ಸಂಬಂಧ ಪ್ರಶ್ನಿಸಲು ಬಂದ ಅಕ್ಕ, ತಮ್ಮನ ಕೊಲೆ: 16 ವರ್ಷದ ಬಾಲಕನಿಂದ ಕೃತ್ಯ
ಶ್ರೀನಿವಾಸ್ ರಂಜಿತ್ ನ ಕರೆದು ವಾರ್ನಿಂಗ್ ಕೂಡ ಮಾಡಿದ್ದರು. ಇದೆಲ್ಲದರಿಂದ ಕೋಪಗೊಂಡ ಶ್ರೀನಿವಾಸ್ ರಂಜಿತ್ ಮೇಲೆ ಸೇಡು ಬೆಳೆಸಿದ್ದಾರೆ. ಇಂದು ಸಂಜೆ ವೇಳೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿ ನಿರ್ಜನ ಪ್ರದೇಶಕ್ಕೆ ರಂಜಿತ್ನನ್ನು ಕರೆತಂದಿದ್ದ ಶ್ರೀನಿವಾಸ್ ಕೊಲೆ ಮಾಡಿದ್ದಾನೆ. ಬನ್ನೇರುಘಟ್ಟ ಪೊಲೀಸರಿಂದ ಆರೋಪಿ ಸದ್ಯ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.
ಠಾಣೆ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ ಹೇಳಿದ್ದಿಷ್ಟು
ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ ಮಾಹಿತಿ ನೀಡಿದ್ದು, ಸೋಕೋ ತಂಡದಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಎಂದು ಹೇಳಿದರು.
ಇದನ್ನೂ ಓದಿ: ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನ ಹತ್ಯೆಗೈದ ಪತಿ: ಬಳಿಕ ಕಾರು ಹಾಯಿಸಿ ವಿಕೃತಿ
ಕೊಲೆ ಬಳಿಕ ಮೃತದೇಹ ಕಾರಿನ ಡಿಕ್ಕಿಗೆ ಹಾಕಲಾಗಿದೆ. ರಂಜಿತ್ನ ಕೊಲೆ ಮಾಡಿದ ಶ್ರೀನಿವಾಸ್ ನೇರವಾಗಿ ಬನ್ನೇರುಘಟ್ಟ ಠಾಣೆಗೆ ಬಂದಿದ್ದಾನೆ ಎಂದು ಬನ್ನೇರುಘಟ್ಟ ಠಾಣೆ ಇನ್ಸ್ ಪೆಕ್ಟರ್ ಕೃಷ್ಣಕುಮಾರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.