
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗುತ್ತದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗುತ್ತದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 27ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಸಕಾರಾತ್ಮಕವಾದ ಸನ್ನಿವೇಶ ಇರಲಿದೆ, ನಿಮಗೆ ಒಳ್ಳೆಯದೇನೋ ಸಂಭವಿಸಲಿದೆ ಎಂಬ ಸೂಚನೆ ಈ ದಿನ ದೊರೆಯಲಿದೆ. ಒಂದು ವೇಳೆ ವಿದೇಶದಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಶುಭ ಸುದ್ದಿ ಕೇಳಿಬರುವಂಥ ಯೋಗವಿದೆ. ಅದೇ ರೀತಿ ವಿದೇಶದಲ್ಲಿ ಉದ್ಯೋಗ ಮಾಡುತ್ತಿರುವಿರಿ ಅಂತಾ ಅಲ್ಲಿ ವೇತನ ಅಥವಾ ಈಗ ಇರುವಂತಹ ಉತ್ತಮ ಸಂಸ್ಥೆಯಲ್ಲಿ ಉದ್ಯೋಗಾವಕಾಶವನ್ನು ಹುಡುಕಬಹುದು. ಮನೆ ಖರೀದಿಗೆ ಪ್ರಯತ್ನ ಮಾಡುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಸಾಧ್ಯತೆ ಇದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಗೃಹಾಲಂಕಾರ ವಸ್ತುಗಳು, ಟೀವಿ, ಕರ್ಟನ್ ಇಂಥವುಗಳಿಗೆ ಹೆಚ್ಚು ಖರ್ಚು ಮಾಡಿದೆ. ಬಜೆಟ್ ಹಾಕಿಕೊಂಡಂತೆ ಯಾವುದೂ ಸಾಗುವುದಿಲ್ಲ. ಆರಂಭದಲ್ಲಿಯೇ ಹೇಳಿದಂತೆ ನಿಮಗೆ ಬೇಕಾದವರು ಸಹ ನಡೆದುಕೊಳ್ಳುವುದಿಲ್ಲ. ಆ ಕಾರಣಕ್ಕೆ ಹೆಚ್ಚುತ್ತಿರುವ ಖರ್ಚು ಹಾಗೂ ವೆಚ್ಚ ನಿಮ್ಮ ಆತಂಕಕ್ಕೆ ಗುರಿಯಾಗಲಿದೆ. ನಿಮಗೆ ಅರಿವಿಲ್ಲದಂತೆಯೂ ಅಥವಾ ಯಾವುದೋ ಉತ್ಸಾಹದಲ್ಲಿ ಒಪ್ಪಿಕೊಂಡ ಕೆಲಸವು ಬಹಳ ಕಷ್ಟ ಎಂಬುದು ಆ ನಂತರ ಅರಿವಿಗೆ ಬರಲಿದೆ. ಸ್ವಂತ ಉದ್ಯಮ ಅಥವಾ ವ್ಯವಹಾರವನ್ನು ಮಾಡುತ್ತಿರುವವರಿಗೆ ಆದಾಯದಲ್ಲಿನ ಆತಂಕಕ್ಕೆ ಕಾರಣ ಆಗಲಿದೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಸಂಭ್ರಮದ ವಾತಾವರಣ ಇರುತ್ತದೆ. ಮಕ್ಕಳು ಅಥವಾ ನಿಮಗಿಂತ ಚಿಕ್ಕ ವಯಸ್ಸಿನವರ ಜೊತೆಗೆ ಉತ್ತಮವಾದ ಸಮಯ ಕಳೆಯುವಂಥ ಅವಕಾಶ ನಿಮಗಿದೆ. ಈ ದಿನ ನೀವು ರುಚಿಕಟ್ಟಾದ ಊಟ ತಿಂಡಿಗಳನ್ನು ಸವಿಯುವಂಥ ಯೋಗವಿದೆ. ಮನೆ ಜಮೀನು ಅಥವಾ ಅಪಾರ್ಟ್ ಮೆಂಟ್ ಖರೀದಿ ಎಂದು ಹುಡುಕುತ್ತಿರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯುವ ಯೋಗವಿದೆ. ಕೆಲವು ಕೆಲಸಗಳು ನೀವು ಅಂದುಕೊಂಡಿದ್ದಕ್ಕಿಂತ ಬಹಳ ವೇಗವಾಗಿ ನಡೆದು ಹೋಗಲಿವೆ. ನಿಮಗೆ ಬಹಳ ಮುಖ್ಯ ಎನಿಸಿದ ಕೆಲಸಗಳನ್ನು ಸಾಧ್ಯವಾದಷ್ಟೂ ನೀವೇ ಮಾಡಲು ಪ್ರಯತ್ನಿಸಿ.
ಜನ್ಮಸಂಖ್ಯೆ 4 (ಯಾವುದೇ ತಿಂಗಳ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಏಕಕಾಲಕ್ಕೆ ಹಲವು ಕೆಲಸ- ಜವಾಬ್ದಾರಿ ನಿರ್ವಹಿಸಬೇಕಾಗಲಿದೆ. ಆತ್ಮವಿಶ್ವಾಸ ಇರುವುದು ಒಳ್ಳೆಯದೇ. ಆದರೆ ನಿಮಗೆ ಗೊತ್ತಿರಬೇಕಾದದ್ದು ಏನೆಂದರೆ, ಈ ದಿನ ಯಾವ ಕೆಲಸವನ್ನು ಸರಳವಾಗಿ ತೆಗೆದುಕೊಳ್ಳಬಾರದು. ನಿಮ್ಮಲ್ಲಿ ಯಾರು ಪಿತ್ರಾರ್ಜಿತ ಆಸ್ತಿಯ ನಿರೀಕ್ಷೆಯಲ್ಲಿ ಇರುವಿರೋ ಅಂತಹವರಿಗೆ ಅಂದುಕೊಂಡಂತೆ ಕೆಲವು ಬೆಳವಣಿಗೆಗಳು ಆಗಲಿವೆ. ಬಹಳ ಮುಖ್ಯವಾದ ಕಾಗದಪತ್ರಗಳು ಅಥವಾ ವಸ್ತುಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆಗೆದುಕೊಳ್ಳಲಾಗಿದೆ ಎಂದಾದಲ್ಲಿ ಸಾಮಾನ್ಯ ದಿನದಿಂದ ಇರಬೇಕಾದ ಎಚ್ಚರಿಕೆಗಿಂತ ಹೆಚ್ಚು ಜಾಗ್ರತೆಯನ್ನು ವಹಿಸಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ನಿಮಗಾಗುವ ಖರ್ಚಿನಿಂದ ಸಂತೋಷ, ತೃಪ್ತಿ ನಿಮಗೆ ದೊರೆಯಲಿದೆ. ಕುಟುಂಬದೊಂದಿಗೆ ಕೂಡಿ ಪ್ರವಾಸಕ್ಕೆ ತೆರಳಲು ಯೋಜನೆ ರೂಪಿಸಿದೆ. ಯಾರು ನಿಮ್ಮನ್ನು ಬೇಕಂತಲೇ ನಂಬಿ, ಅವಮಾನಕ್ಕೆ ಗುರಿಯಾದರೋ ಅವರಿಗೆ ಸರಿಯಾದ ರೀತಿಯಲ್ಲಿ ಪ್ರತೀಕಾರ ಹೇಳಲು ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳಿ. ನಿಮ್ಮಲ್ಲಿ ಕೆಲವರು ಮನೆಗೆ ಸೋಲಾರ್ ಉಪಕರಣಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಅಥವಾ ಎಲಿಕಲ್ ವಾಹನವನ್ನು ಖರೀದಿ ಮಾಡುವುದಕ್ಕಾದರೂ ಅಡ್ವಾನ್ಸ್ ಪಡೆದಿದೆ.
ಜನ್ಮಸಂಖ್ಯೆ 6 (ಯಾವುದೇ ತಿಂಗಳ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ನಾನಾ ಕಾರಣಗಳಿಗೆ ಸಾಮಾನ್ಯ ದಿನಗಳಲ್ಲಿ ಈ ದಿನ ಇರುವುದಿಲ್ಲ. ತಾಳ್ಮೆ, ಸಮಾಧಾನ, ನಿಧಾನ, ಆಲೋಚಿಸಿ ನಿರ್ಧಾರ ಮಾಡುವುದು ಇಂಥ ಯಾವುದನ್ನೂ ಈ ದಿನ ನಿಮ್ಮಿಂದ ಮಾಡುವುದು ಸಾಧ್ಯವಿಲ್ಲ. ಆದ್ದರಿಂದ ಮುಖ್ಯ ಸಂಗತಿಗಳು ಎಂದಾಗ ತಕ್ಷಣವೇ ಅಥವಾ ಆವೇಶದಲ್ಲಿ ಏನನ್ನೂ ಹೇಳದಿರುವುದು ಉತ್ತಮ. ನಿಮಗೆ ತಾತ್ಕಾಲಿಕವಾಗಿ ಅನುಕೂಲ ಆಗಲಿದೆ ಎಂಬ ಕಾರಣಕ್ಕೆ ದೀರ್ಘಾವಧಿ ವಿಚಾರಗಳನ್ನು ನಿರ್ಲಕ್ಷ್ಯ ಮಾಡುವುದಕ್ಕೆ ಹೋಗಬೇಡಿ. ಕುಟುಂಬದ ವ್ಯವಹಾರವನ್ನು ಮಾಡುತ್ತಾ ಬರುತ್ತಿರುವವರಿಗೆ ಈಗ ನಡೆಯುತ್ತಿರುವುದರ ಜೊತೆಗೆ ಹೆಚ್ಚಿನ ವ್ಯವಹಾರವನ್ನು ಸೇರಿಸಿಕೊಳ್ಳಬೇಕು ಎಂಬ ಆಲೋಚನೆ ಮೂಡಬಹುದು.
ಜನ್ಮಸಂಖ್ಯೆ 7 (ಯಾವುದೇ ತಿಂಗಳ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ವಿರಾಮವಾದ ಸ್ಥಿತಿಯಲ್ಲಿ ಇರಲಾಗಿರುತ್ತದೆ. ಪಾರ್ಟಿ, ಗೆಟ್ ಟು ಗೆದರ್ ಗಳಲ್ಲಿ ಭಾಗವಹಿಸುವ ಸಾಧ್ಯತೆ ಈ ದಿನ ಇದೆ. ಸಂಬಂಧಿಗಳು, ಸ್ನೇಹಿತರು ಮತ್ತು ಪರಿಚಯಸ್ಥರು ಹಲವರನ್ನು ಭೇಟಿ ಆಗಿದ್ದಾರೆ. ನಿಮ್ಮ ಮನಸ್ಸು ಉಲ್ಲಾಸದಿಂದ ಕೂಡಿರುತ್ತದೆ. ಹಣಕಾಸಿನ ವಿಚಾರಕ್ಕೆ ಸ್ನೇಹಿತರು ಅಥವಾ ಆಪ್ತರ ಜೊತೆಗೆ ಚರ್ಚೆಯನ್ನು ಮಾಡಲಾಗಿರುತ್ತದೆ. ನಿಮ್ಮಲ್ಲಿ ಈಗಿರುವ ಮನೆಯನ್ನು ಬದಲಾಯಿಸಿ, ಬೇರೆ ಸ್ಥಳಕ್ಕೆ ತೆರಳಬೇಕು ಎಂದಾದರೂ ಆಲೋಚನೆ ಮಾಡುವಲ್ಲಿ ಅಗತ್ಯವಿರುವ ಮಾಹಿತಿ ದೊರೆಯಲಿದೆ. ಇನ್ನು ನೀವು ನಿರೀಕ್ಷೆ ಕೂಡ ಮಾಡದ ರೀತಿಯಲ್ಲಿ ಉದ್ಯೋಗ ಬದಲಾವಣೆ ಅವಕಾಶಗಳು ತೆರೆದುಕೊಳ್ಳುವಂತೆ ಕಾಣುತ್ತವೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ತೀರಾ ಅಗತ್ಯ ಎಂದು ನೀವಾಗಿಯೇ ಕೇಳಿದರೆ, ನಿಮ್ಮ ಸ್ನೇಹಿತರು ಅಥವಾ ಹಣಕಾಸಿನ ನೆರವು ನೀಡುವ ಬಗ್ಗೆ ಖಚಿತವಾಗಿ ಹೇಳುವ ಸಾಧ್ಯತೆಯಿದೆ. ಈ ಹಿಂದೆ ನೀವು ಹೇಳಿದ್ದ ಪ್ರಾಜೆಕ್ಟ್ ಗಾಗಿಯೋ ಅಥವಾ ವ್ಯವಹಾರದ ಮೇಲಿನ ನಂಬಿಕೆಯಿಂದಲೋ ಹಣ ಹಾಕುವುದಕ್ಕೆ ಒಪ್ಪಿಗೆ ಸೂಚಿಸುವ ಅವಕಾಶಗಳು ಹೆಚ್ಚಿಗೆ ಇವೆ. ಇನ್ನು ಈ ದಿನ ರೆಸ್ಟೋರೆಂಟ್, ಸಿನಿಮಾ ಅಥವಾ ಮನರಂಜನೆಗಾಗಿ ಅಂತಲೇ ಕೆಲವು ಸ್ಥಳಗಳಿಗೆ ಕುಟುಂಬ ಸಮೇತ ತೆರಳುವಂಥ ಯೋಗವಿದೆ. ವಾಹನವನ್ನು ಪಾರ್ಕಿಂಗ್ ಮಾಡುವಾಗ ಸಾಮಾನ್ಯ ದಿನಗಳು ಎಚ್ಚರಿಕೆಯಿಂದ ಇರುವುದು ಮುಖ್ಯ.
ಜನ್ಮಸಂಖ್ಯೆ 9 (ಯಾವುದೇ ತಿಂಗಳ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ಈ ದಿನ ಸಾಧ್ಯವಾದಾಗ ಹತ್ತು ನಿಮಿಷ ಕಾಲ ಧ್ಯಾನ ಮಾಡುವುದು ಒಳ್ಳೆಯದು. ಕೆಲವು ಸಂಗತಿಗಳನ್ನು ಯಾಕಾದರೂ ಹೇಳಿದೆನೋ ಎಂಬ ಪರಿಸ್ಥಿತಿ ನಿಮ್ಮದಾಗುತ್ತದೆ. ಒಂದೇ ವಿಚಾರಕ್ಕೆ ಒಬ್ಬ ವ್ಯಕ್ತಿ ಅಥವಾ ನಿಮ್ಮ ಬಳಿ ವಿಚಾರಿಸಲು ಪ್ರಾರಂಭಿಸಬಹುದು ಅಥವಾ ತಮ್ಮ ಪರವಾಗಿ ಶಿಫಾರಸು ಮಾಡುವಂತೆ ಕೇಳಿಕೊಳ್ಳಬಹುದು. ಮಾನಸಿಕ ಹಿಂಸೆ ಆಯಿತೋ ಅಂತಲೋ ಕಿರಿಕಿರಿ ಮಾಡುತ್ತಿರುವ ಕಾರಣಕ್ಕೋ ಕೋಪವನ್ನು ಹೊರ ಹಾಕುವುದಕ್ಕೆ ಹೋಗಬೇಡಿ. ಸಂಗಾತಿ ಕಡೆಯ ನಂತರ ಮನೆಗೆ ಬರುವಂಥ ಯೋಗ ಇದೆ.
ಲೇಖನ- ಎನ್.ಕೆ.ಸ್ವಾತಿ