ಇದು ಕಾಂಗ್ರೆಸ್ ಸಾಧನಾ ಸಮಾವೇಶ, ಶಕ್ತಿ ಪ್ರದರ್ಶನ ಅಲ್ಲ: ಸಿಎಂ ಸಿದ್ದರಾಮಯ್ಯ | Siddaramaiah Says Sadhana Conference Not Show Of Strength Gvd

ಇದು ಕಾಂಗ್ರೆಸ್ ಸಾಧನಾ ಸಮಾವೇಶ, ಶಕ್ತಿ ಪ್ರದರ್ಶನ ಅಲ್ಲ: ಸಿಎಂ ಸಿದ್ದರಾಮಯ್ಯ | Siddaramaiah Says Sadhana Conference Not Show Of Strength Gvd



ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಿಜೆಪಿಗೆ ಉತ್ತರ ನೀಡಲು ನಾವು ಸಮಾವೇಶ ಮಾಡುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು (ಜು.19): ಸುಳ್ಳು ಅಪಪ್ರಚಾರ ಮಾಡುತ್ತಿರುವ ಬಿಜೆಪಿಗೆ ಉತ್ತರ ನೀಡಲು ನಾವು ಸಮಾವೇಶ ಮಾಡುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಗೆ ದುಡ್ಡಿಲ್ಲ ಎಂದು ಬಿಜೆಪಿ ಹೇಳುತ್ತಿದೆ. ನಾವು ಸಾವಿರಾರು ಕೋಟಿ ಹಣವನ್ನು ಒಂದೇ ನಗರಕ್ಕೆ ಮಂಜೂರು ಮಾಡಿದ್ದೇವೆ. ಇದನ್ನು ಜನರಿಗೆ ಹೇಳಲು ಸಮಾವೇಶ ಮಾಡುತ್ತಿದ್ದೇವೆ. ಇದು ಸಾಧನಾ ಸಮಾವೇಶವೇ ಹೊರತು ಶಕ್ತಿ ಪ್ರದರ್ಶನವಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ. ಸುಮಾರು 2,600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು. ನಗರ ಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ ಎಂದರು.

ಕೃಷ್ಣಾ ನದಿ ನೀರು ಹಂಚಿಕೆ; ಕೇಂದ್ರವಿನ್ನೂ ಅಧಿಸೂಚನೆ ಹೊರಡಿಸಿಲ್ಲ: ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ, ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲ ವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ. ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ದಲಿತರನ್ನು ಪ್ರಧಾನಿ ಮಾಡಿ: ದಲಿತರಿಗೆ ನಾಯಕತ್ವ ನೀಡುವ ವಿಚಾರ‌ಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮಾತ್ರ ಸಂವಿಧಾನದ ಆಶಾಯ ಎತ್ತಿ ಹಿಡಿದು ದಲಿತರಿಗೆ ನ್ಯಾಯ ಕೊಟ್ಟಿದೆ. ಖರ್ಗೆ ನಮ್ಮ ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಬಿಜೆಪಿಯವರು ಈಗ ನರೇಂದ್ರ ಮೋದಿ ಬದಲು ಬೇರೊಬ್ಬ ದಲಿತರನ್ನು ಪ್ರಧಾನಿ ಮಾಡಲಿ ನೋಡೋಣ. ವಿಜಯೇಂದ್ರ‌ ಅವರೇ ತಮ್ಮ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡಲಿ ಎಂದು ಸವಾಲು ಹಾಕಿದರು.



Source link

Leave a Reply

Your email address will not be published. Required fields are marked *