Headlines

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?

ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್​ವಾರ್​ಗೆ ಹೋಯ್ತಾ ಜೀವ?


ತೊಕ್ಕೊಟ್ಟು ಫ್ಲೈಓವರ್‌ ಬಳಿ ರೌಡಿಶೀಟರ್‌ ಭೀಕರ ಹತ್ಯೆ: ಗ್ಯಾಂಗ್‌ವಾರ್‌ಗೆ ಹೋಯ್ತಾ ಜೀವ?

ಮಂಗಳೂರು, ಮಾರ್ಚ್ 27: ನಗರದ (ಮಂಗಳೂರು) ಹೊರವಲಯದ ತೊಕ್ಕೊಟ್ಟು ಐಓವರ್‌ನಲ್ಲಿ ಶುಕ್ರವಾರ ನಸುಕಿನ ಜಾವ ರೌಡಿಶೀಟರ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ತಲಪಾಡಿ ಸಮೀಪದ ಮುಳ್ಳುಗುಡ್ಡೆ ನಿವಾಸಿ ಆರಿಫ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ. ಕೊಲೆಗೆ ನೈಜ ಕಾರಣವೇನೆಂಬುದು ತಿಳಿಯಬೇಕಿದೆ.

ಆರಿಫ್ ಬೈಕ್‌ಗೆ ಕಾರಿನಿಂದ ಡಿಕ್ಕಿ

ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿಶೀಟರ್ ಆಗಿದ್ದ ಆರಿಫ್, ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ದುಷ್ಕರ್ಮಿಗಳ ಮೇಲೆ ಹಲ್ಲೆ ನಡೆದಿದೆ. ಆರಿಫ್ ತೆರಳುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ರಸ್ತೆ ಮೇಲೆ ಬಿದ್ದ, ಕಾಯುತ್ತಾ ಕುಳಿತಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆಯ ಭಾಗಕ್ಕೆ ಕಡಿದು ಕೊಲೆಗೈದಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಇದನ್ನೂ ಓದಿ ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ? ಅಕ್ರಮ ಸಂಬಂಧಕ್ಕೆ ಕೊಲೆಯಾದ ರಂಜಿತ್ ತಾಯಿ ಅಳಲು

ಈ ಮೊದಲೂ ನಡೆದಿತ್ತು ಕೊಲೆ ಯತ್ನ

ಆರಿಫ್ ಹಿಂದೆಯೂ ಪ್ರಕರಣಗಳು ದಾಖಲಾಗಿವೆ. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಆತನ ಮೇಲೆ ಕೊಲೆ ಯತ್ನ ನಡೆದಿತ್ತು. ಹೀಗಾಗಿ ಈ ಹತ್ಯೆಗೆ ಗ್ಯಾಂಗ್‌ವಾರ್ ಹಿನ್ನೆಲೆ ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿಯಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *