Headlines

SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ


SSLC ಹಿಂದಿ ಪರೀಕ್ಷೆ ಕೇಂದ್ರಗಳಿಗೆ ಕನ್ನಡ ಸಂಘಟನೆಗಳಿಂದ ಮುತ್ತಿಗೆ ಎಚ್ಚರಿಕೆ: ಪೊಲೀಸ್ ಮೊರೆ ಹೋದ ಶಿಕ್ಷಣ ಇಲಾಖೆ

ಬೆಂಗಳೂರು, ಮಾರ್ಚ್ 27: ಕರ್ನಾಟಕದಲ್ಲಿ ಮಾರ್ಚ್ 30 ರಂದು ನಡೆಯಬೇಕಿದ್ದ ಎಸ್ ಎಸ್ ಎಲ್ ಸಿ (ಎಸ್.ಎಸ್.ಎಲ್.ಸಿ.) ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷಾ ದಿನಾಂಕದಂದು ಬದಲಾವಣೆ ಮಾಡಿ ಶಿಕ್ಷಣ ಇಲಾಖೆ ನಿನ್ನೆ ನಿಗಧಿಪಡಿಸಿದೆ. ಇನ್ನೊಂದೆಡೆ ಹಿಂದಿ ಪರೀಕ್ಷಾ ವಿಚಾರವಾಗಿ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳು ಹಿಂದಿ ಪರೀಕ್ಷೆ ಬರೆಯದೇ ಇದ್ದರೂ ಪಾಸ್ ಮಾಡಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಒಂದು ವೇಳೆ ಹಿಂದಿ ಪರೀಕ್ಷೆ ಮಾಡಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

ಮಹಾವೀರ ಜಯಂತಿಯ ಪ್ರಯುಕ್ತ, ಮಾರ್ಚ್ 30 ರಂದು ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ. ಆದರೆ ಈ ತ್ರಿಭಾಷಾ ಸೂತ್ರವನ್ನು ಮಧ್ಯದಲ್ಲಿ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದು, ಜೊತೆಗೆ ಹಿಂದಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಇದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: SSLC ಒಟ್ಟು ಮಾರ್ಕ್ಸ್ 625 ರಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಇನ್ನು ಈ ವಿಚಾರವಾಗಿ ಸಾರಾ ಗೋವಿಂದು, ಶಿವರಾಮೇಗೌಡ, ಮಂಜು ಸೇರಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ಸಚಿವ ಮಧು ಬಂಗಾರಪ್ಪರನ್ನು ಭೇಟಿ ಮಾಡಲಾಗಿತ್ತು, ಹಿಂದಿ ಪರೀಕ್ಷೆ ಬರೆಯದಿದ್ದರೂ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ಪಾಸ್ ವಿತೌಟ್ ಹಿಂದಿ ಎಂಬ ನಿಯಮ ಜಾರಿ ಮಾಡಿ. ಹಿಂದಿ ಪರೀಕ್ಷೆ ರದ್ದು ಮಾಡಿ, ಹಿಂದಿ ಹೇರಿಕೆ ಮಾಡಬೇಡಿ. ಹಿಂದಿ ಪರೀಕ್ಷೆ ಮಾಡಿದರೆ ಕೇಂದ್ರಗಳಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಕನ್ನಡ ಸಂಘಟನೆಗಳ ಎಚ್ಚರಿಕೆ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚರಿಕೆ

ಕನ್ನಡ ಸಂಘಟನೆಗಳ ಎಚ್ಚರಿಕೆ ಹಿನ್ನೆಲೆ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಪರೀಕ್ಷೆ ದಿನ ಪೊಲೀಸ್ ಭದ್ರತೆ ಪಡೆಯಲು ಮುಂದಾಗಿದೆ. ಪರೀಕ್ಷೆಯ ಸಮಯದಲ್ಲಿ ತೊಂದರೆಯಾಗದಂತೆ ಭದ್ರತೆ ಒದಗಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಭದ್ರತೆಗೆ ಮನವಿ ಮಾಡಲಾಗಿದೆ.

ಸಾರಾ ಗೋವಿಂದು ಹೇಳಿದ್ದಿಷ್ಟು

ಕನ್ನಡಪರ ಹೋರಾಟಗಾರ ಸಾರಾ ಗೋವಿಂದು ಮಾತನಾಡಿದ್ದು, ಸಿಎಂ, ಡಿಸಿಎಂ ಮತ್ತು ಶಿಕ್ಷಣ ಸಚಿವರಿಗೆ ಮೊದಲು ಧನ್ಯವಾದಗಳನ್ನು ತಿಳಿಸುತ್ತೇವೆ. ಹಲವು ವರ್ಷಗಳಿಂದ ನಾವು ಹಿಂದಿ ಹೇರಿಕೆ ಖಂಡಿಸಿ ಹೋರಾಟ ಮಾಡುತ್ತಿದ್ದೇವೆ. ಕಳೆದ ವರ್ಷ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಹಿಂದಿಯಲ್ಲಿ ಫೇಲ್ ಆಗಿದ್ದಾರೆ. ಅದಕ್ಕೂ ಮುಂಚೆಯೇ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಹಿಂದಿಯಲ್ಲಿ ಫೇಲ್ ಆಗಿದ್ದರು. ಇದೇ ವಿಚಾರವನ್ನಿಟ್ಟು ಸಿಎಂಗೂ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯ ಸಹ ದ್ವಿಭಾಷಾ ನೀತಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂದು ಅದು ನೆರವೇರಿದೆ ಎಂದರು.

ಹೆಚ್ಚಿನ ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *