
ಬೆಂಗಳೂರು, (ಮಾರ್ಚ್ 27): ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ , ಐಪಿಎಲ್ ಮ್ಯಾಚ್ಗಳ ಟಿಕೆಟ್ (ಐಪಿಎಲ್ ಟಿಕೆಟ್) ವಿಚಾರವಾಗಿ ಸದನದಲ್ಲಿ ಎತ್ತಿದ ಪ್ರಶ್ನೆ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ವೇದಿಕೆಯಾಗಿದೆ. ಹೌದು..ನಿನ್ನೆ (ಮಾರ್ಚ್ 26) ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಐಪಿಎಲ್ ಮ್ಯಾಚ್ಗಳ ಟಿಕೆಟ್ ಬಗ್ಗೆ ಕೇಳಿದ ಪ್ರಶ್ನೆ ಈಗ ರಾಜಕೀಯ ಜಟಾಪಟಿಗೆ ತಿರುಗಿದೆ. ಏನೋ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದಂತೆ ಸದನದಲ್ಲಿ ಐಪಿಎಲ್ ಟಿಕೆಟ್ ಬೇಡಿಕೆ ಇಟ್ಟಿದ್ದರು. ಇದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಸಹ ಧ್ವನಿಗೂಡಿಸಿದ್ದರು. ಇದರ ಬೆನ್ನಲ್ಲೇ 24 ಗಂಟೆಗಳಲ್ಲಿ ಶಾಸಕರ ಐಪಿಎಲ್ ಟಿಕೆಟ್ ಸಮಸ್ಯೆ ಬಗೆಹರಿದಿದೆ.
ಶಾಸಕರು ತಮ್ಮ ಸ್ವಾರ್ಥಕ್ಕಾಗಿ ಐಪಿಎಲ್ ಟಿಕೆಟ್ ಗಾಗಿ ಅಧಿವೇಶನದಲ್ಲಿ ಧ್ವನಿ ಎತ್ತಿದ ಬೆನ್ನಲ್ಲೇ ಕೆಎಸ್‌ಎಸ್‌ಎಸ್ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು ಇಂದು (ಮಾರ್ಚ್ 27) ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ನಾಳೆ (ಮಾರ್ಚ್ 28) ಉದ್ಘಾಟನಾ ಪಂದ್ಯಕ್ಕೆ ಶಾಸಕರಿಗೆ 1+1 ಒಟ್ಟು 2 ಟಿಕೆಟ್ ನೀಡಲು ಕೆಎಸ್‌ಸಿಎ ಒಪ್ಪಿದೆ. ಶಾಸಕರಿಗೆ ಎರಡು ಟಿಕೆಟ್ ನೀಡಲು ಒಪ್ಪಿರುವ ಕೆಎಸ್‌ಸಿಎ, ಮುಂದಿನ ಐಪಿಎಲ್ ಪಂದ್ಯಕ್ಕೆ 4 ಟಿಕೆಟ್ ಬಗ್ಗೆ ಒಬ್ಬ ವ್ಯಕ್ತಿಗೆ ಆಯ್ಕೆಯಾಗಿದೆ.