ವಾಯವ್ಯ ಸಾರಿಗೆ ಸಂಸ್ಥೆ ಹುದ್ದೆಗಳ ಪರೀಕ್ಷೆ ಮುಂದೂಡಿದ-KEA; ಹೊಸ ವೇಳಾಪಟ್ಟಿ ಮತ್ತು ಪ್ರಮುಖ ನಿಯಮಗಳು ಇಲ್ಲಿವೆ | Karnataka Examinations Authority Nwkrtc Recruitment Exam Postponed New Date April 10 Sat

ವಾಯವ್ಯ ಸಾರಿಗೆ ಸಂಸ್ಥೆ ಹುದ್ದೆಗಳ ಪರೀಕ್ಷೆ ಮುಂದೂಡಿದ-KEA; ಹೊಸ ವೇಳಾಪಟ್ಟಿ ಮತ್ತು ಪ್ರಮುಖ ನಿಯಮಗಳು ಇಲ್ಲಿವೆ | Karnataka Examinations Authority Nwkrtc Recruitment Exam Postponed New Date April 10 Sat



ವಾಯವ್ಯ ಸಾರಿಗೆ ಸಂಸ್ಥೆ ಹುದ್ದೆಗಳ ಪರೀಕ್ಷೆ ಮುಂದೂಡಿದ-KEA; ಹೊಸ ವೇಳಾಪಟ್ಟಿ ಮತ್ತು ಪ್ರಮುಖ ನಿಯಮಗಳು ಇಲ್ಲಿವೆ | Karnataka Examinations Authority Nwkrtc Recruitment Exam Postponed New Date April 10 Sat

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ದರ್ಜೆ-2 ಅಧಿಕಾರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಉಪಚುನಾವಣೆಯ ಕಾರಣದಿಂದ ಏಪ್ರಿಲ್ 9 ರಿಂದ ಏಪ್ರಿಲ್ 10, 2026 ಕ್ಕೆ ಮುಂದೂಡಿದೆ. ಈ ಪರೀಕ್ಷೆಯ ಪರಿಷ್ಕೃತ ವೇಳಾಪಯಟ್ಟಿನ್ನು ಪ್ರಕಟಿಸಲಾಗಿದೆ.

ಬೆಂಗಳೂರು (ಮಾ.27): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿನ (NWKRTC) ವಿವಿಧ ವೃಂದದ ದರ್ಜೆ-2 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕವನ್ನು ಪರಿಷ್ಕರಿಸಿದೆ. ಏಪ್ರಿಲ್ 9 ರಂದು ನಡೆಯಬೇಕಿದ್ದ ಪರೀಕ್ಷೆಯು ಈಗ ಏಪ್ರಿಲ್ 10 ಕ್ಕೆ ಮುಂದೂಡಲ್ಪಟ್ಟಿದೆ.

ದಿನಾಂಕ ಬದಲಾವಣೆಗೆ ಕಾರಣವೇನು?

ಪ್ರಾಧಿಕಾರದ ಪ್ರಕಟಣೆಯ ಪ್ರಕಾರ, ಏಪ್ರಿಲ್ 9, 2026 ರಂದು ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಚುನಾವಣಾ ಪ್ರಕ್ರಿಯೆ ಮತ್ತು ಭದ್ರತೆಯ ದೃಷ್ಟಿಯಿಂದ ಅಂದು ಪರೀಕ್ಷೆ ನಡೆಸುವುದು ಕಷ್ಟಸಾಧ್ಯವಾದ ಕಾರಣ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಪರೀಕ್ಷೆಯನ್ನು ಒಂದು ದಿನ ಮುಂದಕ್ಕೆ ಅಂದರೆ ಏಪ್ರಿಲ್ 10, 2026 ರ ಶುಕ್ರವಾರದಂದು ನಡೆಸಲು ತೀರ್ಮಾನಿಸಿದ್ದಾರೆ.

ಪರೀಕ್ಷೆಯ ವಿವರಗಳು:

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಒಟ್ಟು 33 ವಿವಿಧ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸುಮಾರು 2,500 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಮಾತ್ರ ಈ ಲಿಖಿತ ಪರೀಕ್ಷೆ ನಡೆಯಲಿದೆ. ಸದ್ಯದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರಗಳನ್ನು (Hall Tickets) ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.

ಪರಿಷ್ಕೃತ ವೇಳಾಪಟ್ಟಿ (ಏಪ್ರಿಲ್ 10, 2026 – ಶುಕ್ರವಾರ)

  • ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದೆ:
  • ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:30 ರವರೆಗೆ: ಪತ್ರಿಕೆ-1 (ಸಾಮಾನ್ಯ ಪತ್ರಿಕೆ) – 100 ಪ್ರಶ್ನೆಗಳು, 300 ಅಂಕಗಳು.
  • ಮಧ್ಯಾಹ್ನ 02:30 ರಿಂದ ಸಂಜೆ 04:30 ರವರೆಗೆ: ಪತ್ರಿಕೆ-2 (ನಿರ್ದಿಷ್ಟ ಪತ್ರಿಕೆ) – 100 ಪ್ರಶ್ನೆಗಳು, 300 ಅಂಕಗಳು.

ಸಹಾಯಕ ಆಡಳಿತಾಧಿಕಾರಿ, ಸಹಾಯಕ ಲೆಕ್ಕಾಧಿಕಾರಿ, ಸಹಾಯಕ ಕಾನೂನು ಅಧಿಕಾರಿ, ಸಹಾಯಕ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಸಹಾಯಕ ತಾಂತ್ರಿಕ ಶಿಲ್ಪಿ ಹಾಗೂ ಸಹಾಯಕ ಸಂಚಾರ ವ್ಯವಸ್ಥಾಪಕ ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ.

Scroll to load tweet…

ಅಭ್ಯರ್ಥಿಗಳು ಗಮನಿಸಬೇಕಾದ ಕಟ್ಟುನಿಟ್ಟಿನ ನಿಯಮಗಳು:

ಋಣಾತ್ಮಕ ಮೌಲ್ಯಮಾಪನ (Negative Marking): ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/4 ರಷ್ಟು ಅಂಕಗಳನ್ನು (0.75 ಅಂಕ) ಕಳೆಯಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕರಾಗಿ ಉತ್ತರ ನೀಡಬೇಕು.

ಐದನೇ ಆಯ್ಕೆಯ ನಿಯಮ: ಉತ್ತರ ನೀಡದ ಪ್ರಶ್ನೆಗಳಿಗೆ ‘ಐದನೇ ಆಯ್ಕೆ/ವೃತ್ತ’ವನ್ನು ಶೇಡ್ ಮಾಡುವುದು ಕಡ್ಡಾಯ. ಯಾವುದೇ ಆಯ್ಕೆಯನ್ನು ಶೇಡ್ ಮಾಡದಿದ್ದಲ್ಲಿ ಆ ಪ್ರಶ್ನೆಗೆ 0.75 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಇದಕ್ಕಾಗಿ ಪರೀಕ್ಷೆಯ ನಂತರ ಹೆಚ್ಚುವರಿಯಾಗಿ 5 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.

ವರದಿ ಮಾಡುವ ಸಮಯ: ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ (Friscking) ಪ್ರಕ್ರಿಯೆ ಇರುವುದರಿಂದ ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಹಾಜರಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್ http://kea.kar.nic.in ಅನ್ನು ಗಮನಿಸುತ್ತಿರಲು ಸೂಚಿಸಲಾಗಿದೆ.



Source link

Leave a Reply

Your email address will not be published. Required fields are marked *