ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd



ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd

ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿದರು.

ಬಾಗಲಕೋಟೆ (ಮಾ.27): ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕಿಲ್ಲಾ ವಾರ್ಡ್‌ ನಂ.11 ಹಾಗೂ 13 ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರದ ವೇಳೆ ಮಾತನಾಡಿದ ಅವರು, ಚರಂತಿಮಠ ಜನಪ್ರಿಯ ನಾಯಕರಾಗಿದ್ದು, ಹಲವು ಅಭಿವೃದ್ಧಿ ಕಾರ್ಯಕೈಗೊಂಡಿದ್ದಾರೆ.

ಮನೆಮನೆ ಪ್ರಚಾರಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, ನಮಗೆ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಚರಂತಿಮಠ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿ, ರಾಜ್ಯದ ಜನತೆ ಸರ್ಕಾರದ ಮೇಲೆ ವಿಶ್ವಾಸ ಇಟ್ಟು ಹೆಚ್ಚಿನ ಸ್ಥಾನ ನೀಡಿದ್ದಾರೆ. ಆದರೆ ಕಳೆದ ಎರಡು-ಮೂರು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸರಿಯಾಗಿ ಅರ್ಥಮಾಡಿಕೊಳ್ಳಬೇಕು

ಇವಿಎಂ ಕುರಿತಾಗಿ ಮಾತನಾಡಿ, ಇತ್ತೀಚಿನ ಚುನಾವಣೆಯಲ್ಲಿ ಇದೇ ವ್ಯವಸ್ಥೆ ಮೂಲಕ ಬಹುಮತ ದೊರೆತಿದೆ. ಈ ಹಿನ್ನೆಲೆ ಇವಿಎಂ ವಿರುದ್ಧದ ಆರೋಪಗಳು ಅರ್ಥವಿಲ್ಲ. ರಾಹುಲ್ ಗಾಂಧಿ ಈ ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದ ಅವರು, ಡಿಸಿಎಂ ಡಿ. ಕೆ. ಶಿವಕುಮಾರ್‌ ಅವರ ಹೇಳಿಕೆಗಳಿಗೂ ಪ್ರತಿಕ್ರಿಯಿಸಿ, ಸದನದಲ್ಲಿ ಬಳಸುವ ಭಾಷೆ ಮತ್ತು ವರ್ತನೆ ಕುರಿತು ಟೀಕಿಸಿದರು.

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಪ್ರಚಾರದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ಬಾದಾಮಿ ಕ್ಷೇತ್ರದಲ್ಲಿ ನಡೆದ ಅಭಿವೃದ್ಧಿ ಬಗ್ಗೆ ಜನರಿಗೆ ತಿಳಿದಿದ್ದು, ಮತದಾರರು ಅದನ್ನಾಧರಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಪುನರುಚ್ಚರಿಸಿದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮೋಹನ ಜಾಧವ, ರಾಜು ನಾಯ್ಕರ, ಶ್ರೀನಾಥ ಸಜ್ಜನ,ಗುಂಡು ಶಿಂದೆ, ಎಂ.ಆರ್. ಶಿಂದೆ, ತಾನಾಜಿ ಜಮಖಂಡಿ, ದೀಲಿಪ್, ರಂಗನಾಥ ಜವಳಿ, ರಾಜು ಮೊರೆ, ಶಂಕರ ಕದಂ, ಆನಂದ ಕಲಾಲ, ಶ್ರೀಕಾಂತ ಪತ್ತಾರ, ರಮೇಶ ಕೋಟಿ, ರಾಜು ವಾಘ, ಮಹಾಂತೇಶ ಕೊಡಚಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.



Source link

Leave a Reply

Your email address will not be published. Required fields are marked *