Headlines

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ


ಹಾಡಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಖದೀಮರು: ಸಿಸಿಟಿವಿ ವಿಡಿಯೋ ನೋಡಿ

ನೆಲಮಂಗಲ, ಮಾರ್ಚ್ 28: ಹಾಡಹಗಲೇ, ಜನಸಂಚಾರ ಇರುವ ಪ್ರದೇಶದಲ್ಲಿಯೇ ಖದೀಮರು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಬಿಕಾ ಎಂಬವರು ಸ್ನೇಹಿತೆಯೊಂದಿಗೆ ಬೇಕರಿ ಮುಂದೆ ನಿಂತು ಮಾತನಾಡುತ್ತಿದ್ದಾಗ, ಅಲ್ಲೇ ಜ್ಯೂಸ್ ಕುಡಿಯುತ್ತಿದ್ದಂತೆ ನಟಿಸಿದ ಇಬ್ಬರು ಖತರ್ನಾಕ್ ಖದೀಮರುಾರ್ಧದಲ್ಲಿ ಮಹಿಳೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾಳೆ. ಸರ ​​ಎಳೆದ ರಭಸಕ್ಕೆ ಮಹಿಳೆ ನೆಲಕ್ಕುರುಳಿದ್ದಾರೆ. ಸುಮಾರು 55 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕದ್ದೊಯ್ಯಲಾಗಿದೆ.

ಸರ ​​ಕಳವಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಸಿಕ್ಕ ದೃಶ್ಯ, ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನೆ ಕುದೂರು ಪೊಲೀಸ್ ಠಾಣೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ವರದಿ: ಮಂಜುನಾಥ್, ಟಿವಿ9 ನೆಲಮಂಗಲ

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *