
ಬೆಂಗಳೂರು, ಮಾರ್ಚ್ 28: ರವಿಶಂಕರ್ ಗುರೂಜಿ (ಶ್ರೀ ಶ್ರೀ ರವಿಶಂಕರ್ ಗುರೂಜಿ) ವಿರುದ್ಧದ ಭೂ ಕಬಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ, ರವಿಶಂಕರ್ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲದೆ ಪ್ರಕರಣವನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ತಿಳಿಸಿ ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ ದಾಖಲಿಸಿದ ಪ್ರಕರಣವನ್ನು ರದ್ದುಗೊಳಿಸಲಾಗಿದೆ.
ಸ್ಪಷ್ಟ ಆರೋಪವಿಲ್ಲ, ಸಾಕ್ಷಿಗಳಿಲ್ಲ!
ಬೆಂಗಳೂರು ಮಹಾನಗರ ಟಾಸ್ಕ್ ಫೋರ್ಸ್ 19 ಸೆಪ್ಟೆಂಬರ್ 2025 ರಂದು ಕರ್ನಾಟಕ ಭೂ ಆದಾಯ ಕಾಯ್ದೆ 1964 ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿತ್ತು. ಕಗ್ಗಳಿಪುರ ಗ್ರಾಮದ ವಿವಿಧ ಸರ್ವೆಯಲ್ಲಿರುವ ಸರ್ಕಾರಿ ಭೂಮಿ, ಕೆರೆ ಮತ್ತು ರಾಜಕಾಲುವೆ ಅಕ್ರಮವಾಗಿ ಕಬಳಿಸಲಾಗಿದೆ ಎಂದು ಆರೋಪಿಸಲಾಯಿತು. ಈ ಹಿನ್ನೆಲೆ ಪಿಐಎಲ್, ಲ್ಯಾಂಡ್ ಗ್ರಾಬಿಂಗ್ ವಿಶೇಷ ನ್ಯಾಯಾಲಯದ ವಿಚಾರಣೆ ಮತ್ತು ತಹಶೀಲ್ದಾರ್ ವರದಿ ಆಧಾರದ ಮೇಲೆ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ 70 ಗಂಟೆ ಕೆಲಸ ಮಾಡಿದ್ದೇನೆ, ಎಷ್ಟು ಮಾನಸಿಕವಾಗಿ ಸಿದ್ಧರಾಗಿದ್ದೀರಾ ಮುಖ್ಯ: ರವಿಶಂಕರ್ ಗುರೂಜಿ
ಈ ನೀಡಿದ ಶ್ರೀ ರವಿಶಂಕರ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಪರಿಶೀಲಿಸಿದ ಕರ್ನಾಟಕ ಅರ್ಜಿದಾರರ ವಿರುದ್ಧ ಯಾವುದೇ ಸ್ಪಷ್ಟ ಆರೋಪಗಳಿಲ್ಲವೆಂದು ಗಮನಿಸಲಾಗಿದೆ. ಹೀಗಾಗಿ ಕೇವಲ ಪ್ರತಿವಾದಿಯಾಗಿ ಹೆಸರು ಸೇರಿಸಿರುವುದನ್ನು ಆಧಾರವನ್ನಾಗಿಟ್ಟುಕೊಂಡು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪ್ರಾಥಮಿಕ ಸಾಕ್ಷ್ಯಗಳಿಲ್ಲದೆ ಪ್ರಕರಣವನ್ನು ಮುಂದುವರಿಸುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯವು ಗುರೂಜಿ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ