Headlines

Tragedy in Belagavi: ಬೆಳ್ಳಂ ಬೆಳಗ್ಗೆ ಟಿಪ್ಪರ್ ಹರಿದು ಮಹಿಳಾ ಪೌರಕಾರ್ಮಿಕ ಸ್ಥಳದಲ್ಲೇ ದುರ್ಮರಣ! | Tragedy In Belagavi Woman Sanitation Worker Crushed To Death By Tipper Truck Rav

ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಕರ್ತವ್ಯನಿರತರಾಗಿದ್ದ ಅವಕ್ಕಾ ಕೋಲಕಾರ ಎಂಬ 50 ವರ್ಷದ ಮಹಿಳಾ ಪೌರಕಾರ್ಮಿಕರ ಮೇಲೆ ವೇಗವಾಗಿ ಬಂದ ಟಿಪ್ಪರ್ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗಾವಿ (ಮಾ.28): ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟಿಪ್ಪರ್ ಹರಿದು ಕರ್ತವ್ಯನಿರತರಾಗಿದ್ದ ಮಹಿಳಾ ಪೌರಕಾರ್ಮಿಕರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ನಗರದ ಖಾನಾಪುರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಅವಕ್ಕಾ ಕೋಲಕಾರ (50) ಮೃತಪಟ್ಟ ದುರ್ದೈವಿ.ಎಂದಿನಂತೆ ಇಂದು ಮುಂಜಾನೆ ನಗರದ ಕಸ ಕ್ಲೀನ್ ಮಾಡಲು ಬಂದಿದ್ದ ಕಾರ್ಮಿಕ ಮಹಿಳೆ. ಆದರೆ ವಿಧಿಯಾಟವೇ ಬೇರೆ ಆಗಿತ್ತು. ವೇಗವಾಗಿ ಬಂದ ಟಿಪ್ಪರ್ ಲಾರಿ ಮೃತ ಮಹಿಳೆಗೆ ಡಿಕ್ಕಿ ಹೊಡೆದಿದೆ.

ಪೌರಕಾರ್ಮಿಕ ಮಹಿಳೆಗೆ ಟಿಪ್ಪರ್ ಡಿಕ್ಕಿ ಚಾಲಕ ಪರಾರಿ

ವೇಗವಾಗಿ ಬಂದು ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಕರ ಘಟನೆ ನಡೆದ ಬೆನ್ನಲ್ಲೇ ಚಾಲಕ ಟಿಪ್ಪರ್ ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಮಾಜಿ ಮೇಯರ್ ಭೇಟಿ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಉಪಮೇಯರ್ ವಾಣಿ ಜೋಶಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Source link

Leave a Reply

Your email address will not be published. Required fields are marked *