
ಬೆಂಗಳೂರು, ಮಾರ್ಚ್ 28: ಪಿಐಎಸ್ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುವ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮೂರಳಿಧರ ದೇಶಪಾಂಡೆ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಎರಡು ದಿನಗಳ ಹಿಂದೆ ನಡೆದಿದೆ.
ಪಾಠದ ಮಧ್ಯದಲ್ಲಿ ಮಕ್ಕಳ ಗಲಾಟೆಯಿಂದಲೋ ಏನೋ ದೇಶಪಾಂಡೆ ಗರಂ ಆಗಿದ್ದು, ನೀವೆಲ್ಲಾ ಭಯೋತ್ಪಾದಕರು ಎಂದೆಲ್ಲಾ ನಿಂದಿಸಿದ್ದಾರೆ. ಇದೇ ವೇಳೆ ತರಗತಿಯಲ್ಲಿ ಕುಳಿತಿದ್ದ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಅವರು ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಬಗ್ಗೆ ಈ ದೂರು ದಾಖಲಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ವಿಶ್ವವಿದ್ಯಾಲಯದ ಆಡಳಿತವು ತಕ್ಷಣ ಕ್ರಮ ಕೈಗೊಂಡಿದೆ ಪ್ರೊಫೆಸರ್ ಅವರನ್ನು ಅಮಾನತುಗೊಳಿಸಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ