
ಚಿಕ್ಕಮಗಳೂರು, ಮಾ.28: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹವಾಮಾನ ದಿಢೀರ್ ಬದಲಾಗಿದ್ದು, ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದಾದ್ಯಂತ ಬಿರುಗಾಳಿ ಮಳೆ ಸುರಿಯುತ್ತಿದೆ, ತಾಲೂಕಿನ ಗ್ರಾಮೀಣ ಭಾಗದ ಮಳೆಯ ಆರ್ಭಟ ಜೋರಾಗಿದೆ. ಆಲ್ದೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ, ಕಾಫಿ ತೋಟಗಳಿಗೆ ಇದು ಆಸರೆಯಾದರೂ ಬಿರುಗಾಳಿಯ ಭೀತಿ ಆವರಿಸಿದೆ. ಮೂಡಿಗೆರೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದ್ದು, ರಸ್ತೆಗಳು ನದಿಯಂತಾಗಿವೆ. ವಾಹನಗಳು ತುಂಬಿ ಹರಿಯುತ್ತಿವೆ, ವಾಹನ ಸವಾರರು ಸಂಚರಿಸಲು ಪರದಾಡಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ಮಳೆ ನೀರು ಹರಿಯುತ್ತಿದೆ, ಮಾರುಕಟ್ಟೆಗೆ ಬಂದಿದ್ದ ಸಾರ್ವಜನಿಕರು ಮತ್ತು ವಾಹನ ಸವಾರರು ಹೈರಾಣಾಗಿದ್ದಾರೆ. ಮಲೆನಾಡು ಭಾಗದ ಹಲವೆಡೆ ಮರಗಳು ಉರುಳುವ ಭೀತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ವಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ