
ವಾಷಿಂಗ್ಟನ್, 28: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿಯ ನಂತರ ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಸ್ಥಳ ಮತ್ತು ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಇದರ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಡೊನಾಲ್ಡ್ ಟ್ರಂಪ್) ಶಾಕಿಂಗ್ ಹೇಳಿಕೆ ನೀಡಿದ್ದು, ಮೊಜ್ತಬಾ ಖಮೇನಿ ಸತ್ತಿರಬಹುದು ಅಥವಾ ತುಂಬ ಕೆಟ್ಟ ಸ್ಥಿತಿಯಲ್ಲಿರಬಹುದು ಎಂದು ಹೇಳಿದ್ದಾರೆ.
“ಅಮೆರಿಕದ ಮಿಲಿಟರಿ ಕಾರ್ಯಾಚರಣೆಯು ಇರಾನ್‌ನ ನಾಯಕತ್ವ ಮತ್ತು ಮಿಲಿಟರಿ ಶಕ್ತಿಯನ್ನು ನಾಶಪಡಿಸಿದೆ. ಇರಾನ್‌ನ ನಾಯಕ ಸತ್ತಿದ್ದಾರೆ ಎಂದು ನನಗೆ ಅನಿಸುತ್ತದೆ. ಅಥವಾ ಅವರು ಕೆಟ್ಟ ಸ್ಥಿತಿಯಲ್ಲಿಯೂ ಇರಬಹುದು. ಏಕೆಂದರೆ ಅವರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ” ಎಂದು ನೂತನ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ