
ಮೈಸೂರು, ಮಾರ್ಚ್ 28: ರಾಜ್ಯ ಸರ್ಕಾರ SSLC ಪರೀಕ್ಷೆಯಲ್ಲಿ ಹಿಂದಿ ತೃತೀಯ ಭಾಷೆ ಕಡ್ಡಾಯವಲ್ಲ ಎಂದು ಘೋಷಿಸಲಾಗಿದೆ. ಸದ್ಯ ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ. ಕಡ್ಡಾಯ ಬೇಡ ಎಂದು ಹೇಳುತ್ತಿದ್ದೇನೆ. ಸುಮ್ಮನೆ ಹಿಂದಿ ಹೇರಿಕೆಯಾಗಬಾರದು. ವಿರೋಧ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ ಆಗುತ್ತೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.