
ಜನವರಿ, ಮಾರ್ಚ್ 29: ಇರಾನ್ ಯುದ್ಧ ಶುರುವಾದ ಬಳಿಕ ಎಲ್ಲರ ಗಮನ ಹಾರ್ಮುಜ್ ಜಲಸಂಧಿಯತ್ತ (ಹೋರ್ಮುಜ್ ಜಲಸಂಧಿ) ನೆಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಬರುವ ತೈಲ ಹಡಗುಗಳಿಗೆ ಇರಾನ್ ತಡೆ ಹಾಕಿದೆ. ಇದರಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದೆ. ಹಾರ್ಮುಜ್ ಜಲಸಂಧಿ ಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಪರ್ಷಿಯನ್ ಗಲ್ಫ್ ಮತ್ತು ಅರೇಬಿಯನ್ ಸಮುದ್ರಕ್ಕೆ ಕೊಂಡಿಯಾಗಿರುವ ಈ ಜಲಸಂಧಿ ಮೂಲಕ ವಿಶ್ವದ ಶೇ. 20ರಷ್ಟು ತೈಲವು ಹಡಗುಗಳಿಂದ ಸಾಗಿ ಹೋಗುತ್ತದೆ. ಇದೆ ಹೊತ್ತಲ್ಲಿ ಈಗ ಮತ್ತೊಂದು ಜಲಸಂಧಿ ಸುದ್ದಿ ಬಂದಿದೆ. ಅದುವೇ ಬಾಬ್ ಎಲ್ ಮಂಡೆಬ್ ಸ್ಟ್ರೇಟ್ (ಬಾಬ್ ಎಲ್-ಮಂಡೇಬ್ ಜಲಸಂಧಿ).
ಇದು ರೆಡ್ ಸೀ ಅಥವಾ ಕೆಂಪು ಸಮುದ್ರದಲ್ಲಿರುವ ಒಂದು ಕಿರಿದಾದ ಜಲಮಾರ್ಗ. ಈಜಿಪ್ಟ್ನ ಸೂಜ್ ಕೆನಾಲ್ಗೆ (ಸೂಯೆಜ್ ಕಾಲುವೆ) ಹೋಗಬೇಕಾದರೆ ಈ ಜಲಸಂಧಿ ಮೂಲಕವೇ ಹಡಗುಗಳು ಸಾಗಬೇಕು. ಕುತೂಹಲ ಎಂದರೆ ಈ ಬಾಬ್ ಎಲ್ ಮಂಡೆಬ್ ಎಂದರೆ ಅರೇಬಿಕ್ ಭಾಷೆಯಲ್ಲಿ ಕಣ್ಣೀರು ದ್ವಾರ. ಇದರ ಆಜುಬಾಜಿನಲ್ಲಿರುವ ದೇಶಗಳಲ್ಲಿ ಯೆಮೆನ್ ಕೂಡ ಒಂದು. ಈ ವಿಚಾರವೇ ಈಗ ಜಾಗತಿಕ ಭೀತಿಗೆ ಕಾರಣವಾಗಿರುವುದು.
ಇದನ್ನೂ ಓದಿ: ಹಾರ್ಮುಜ್ ಜಲಸಂಧಿ, ಖಾರ್ಗ್ ದ್ವೀಪದ ಮೇಲೆ ದಾಳಿ ಮಾಡುತ್ತಾ ಅಮೆರಿಕ, 3,500 ಸೈನಿಕರನ್ನು ನಿಯೋಜಿಸಿರುವುದೇಕೆ?
ಯೆಮೆನ್ ನಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ಸಂಘಟನೆಯ ಉಪಸ್ಥಿತಿ ಇದೆ. ಇರಾನ್ ಸೂಚನೆ ಕೊಟ್ಟರೆ ಹೌತಿ ಬಂದುಕೋರರು ಈ ಜಲಸಂಧಿಯಲ್ಲಿ ದಾಳಿ ಶುರು ಹಚ್ಚಿಕೊಳ್ಳಬಹುದು. ಬಾಬೆಲ್ ಮಂಡೆಬ್ ಜಲಸಂಧಿ ಬಹಳ ಮುಖ್ಯವಾದ ಟ್ರೇಡಿಂಗ್ ರೂಟ್ನಲ್ಲಿದೆ. ಇದಕ್ಕೆ ತಡೆ ಬಿದ್ದರೆ ಹಾರ್ಮುಜ್ ಜಲಸಂಧಿ ಜೊತೆಗೆ ಪರಿಣಾಮ ಘೋರ.
ಹಾರ್ಮುಜ್ ಜಲಸಂಧಿಯಲ್ಲಿ ನೌಕೆಗಳು ತೈಲ ಸಾಗಣೆ ಮಾಡುತ್ತವೆ. ಆದರೆ, ಬಾಬೆಲ್ ಮಂಡೆಬ್ ಜಲಸಂಧಿ ಇನ್ನೂ ದೊಡ್ಡ ವ್ಯಾಪಾರ ಮಾರ್ಗಕ್ಕೆ ಬರುತ್ತದೆ. ತೈಲವಷ್ಟೇ ಅಲ್ಲ, ಹಲವು ಸರಕುಗಳ ಸಾಗಣೆಯಾಗಿದೆ. ಏಷ್ಯಾ ಮತ್ತು ಯೂರೋಪ್ ನಡುವೆ ಹಡಗುಗಳು ಸಾಗಲು ಇದೆ ಜಲಸಂಧಿಯನ್ನು ದಾಟಿ ಹೋಗಬೇಕು. ವಿಶ್ವದ ಅತ್ಯಂತ ನಿರತವಾಗಿರುವ ಮತ್ತು ಬಹಳ ಮುಖ್ಯವಾಗಿರುವ ಜಲಮಾರ್ಗದಲ್ಲಿ ಬಾಬ್ ಎಲ್ ಮಂಡೆಬ್ ಜಲಸಂಧಿ ಇದೆ.
ವಿಶ್ವದ ಶೇ. 10 ಹೆಚ್ಚು ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆ, ಶೇ. 12ರಷ್ಟು ಜಾಗತಿಕ ಟ್ರೇಡಿಂಗ್ಗಳು ಈ ಜಲಸಂಧಿಯನ್ನು ಮುಟ್ಟಿ ಹೋಗಬೇಕು.
ಇದನ್ನೂ ಓದಿ: ಪರ್ಷಿಯನ್ ಶಾರ್ಕ್ಗಳಿಗೆ ಆಹಾರವಾಗುತ್ತಾರೆ ಅಮೆರಿಕನ್ ಸೈನಿಕರು: ಇರಾನ್ ಎಚ್ಚರಿಕೆ
ರೆಡ್ ಸೀ ಮಾರ್ಗದಲ್ಲಿ ಈ ಮೊದಲು 26,000 ಹಡಗುಗಳು ಸಾಗುತ್ತಿದ್ದವು. ಹೌತಿಗಳ ದಾಳಿ ಘಟನೆಗಳು ಪ್ರಾರಂಭವಾದ ಮೇಲೆ 2025 ರಲ್ಲಿ ಇಲ್ಲಿ ಸಾಗುವ ಹಡಗುಗಳ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ. ಭಾರತದ ಬಹಳಷ್ಟು ಸರಕುಗಳನ್ನು ಹೊತ್ತ ಹಡಗುಗಳು ಈ ಮಾರ್ಗದಲ್ಲಿ ಹೋಗುತ್ತವೆ. ಇಲ್ಲಿ ಹೌತಿಗಳಿಂದ ಜಲಸಂಧಿಗೆ ಪೂರ್ಣ ತಡೆ ಬಿದ್ದರೆ ಭಾರತದ ಆರ್ಥಿಕತೆಗೆ ದೊಡ್ಡ ಹೊಡೆತ ಕೊಡುವ ಸಾಧ್ಯತೆ ಇದೆ.
ಹೆಚ್ಚಿನ ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ