ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ


ಭಾರತದಲ್ಲಿ ಪೆಟ್ರೋಲ್, ಎಲ್ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ಜನವರಿ, ಮಾರ್ಚ್ 29: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ (ಐರಾನ್ ಯುದ್ಧ) ಇನ್ನೂ ಅಂತ್ಯವಾಗದ ತೈಲ ಕಂಟಕ ಮತ್ತಷ್ಟು ಹೆಚ್ಚುತ್ತಿದೆ. ಪೆಟ್ರೋಲ್, ಡೀಸಲ್, ಗ್ಯಾಸ್ ಸಿಗದೇ ಹೋಗಬಹುದು ಎಂದು ಜನರು ಆತಂಕಪಡುತ್ತಿದ್ದಾರೆ. ಇಂಧನ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಜನರಿಗೆ ಆತಂಕ ತಪ್ಪಿಲ್ಲ. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಇಂದು ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇಂಧನ ಪರಿಸ್ಥಿತಿ ಬಗ್ಗೆ ಇಂಚಿಂಚು ಮಾಹಿತಿ ನೀಡಿದೆ.

ಇಂಧನ ಪೂರೈಕೆ ನಿರಂತರವಾಗಿ ನಡೆಯಲು ಪ್ರಯತ್ನಗಳನ್ನು ಹಾಕಲಾಗುತ್ತಿದೆ. ಸಾರ್ವಜನಿಕರು ಯಾವುದೇ ವದಂತಿಗಳನ್ನು ಬೇಡ ಎಂದು ಸರ್ಕಾರವು ಈ ಪ್ರಕಟಣೆಯ ಮೂಲಕ ಮನವಿ ಮಾಡಿದೆ.

ಇದನ್ನೂ ಓದಿ: ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸಲ್ ಪೂರೈಕೆ ನಿರಂತರವಾಗಿ ಆಗುತ್ತಿದೆ. ಎಲ್ಪಿಜಿ ಸಮಸ್ಯೆ ಕಡಿಮೆ ಮಾಡಲು ಪಿಎನ್ಜಿ ಸಂಪರ್ಕ ಹೆಚ್ಚಿಸಲಾಗಿದೆ. ಎಲ್ಲಾ ರಿಫೈನರಿಗಳು ಉತ್ತಮ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವಾಲಯವು ಮಾಹಿತಿ ನೀಡಿದೆ.

ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂನಷ್ಟು ಕಡಿಮೆ ಮಾಡಿದೆ. ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್ ಮತ್ತು ಡೀಸಲ್ ಅನ್ನು ರಫ್ತು ಮಾಡದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಒಂದು ಲೀಟರ್ ಡೀಸಲ್‌ಗೆ 21.5 ರೂ ರಫ್ತು ಸುಂಕ ಹಾಕಲಾಗುತ್ತಿದೆ ಎಂದು ಸರ್ಕಾರ.

ಇದನ್ನೂ ಓದಿ: ಏಪ್ರಿಲ್ 1 ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ಎಲ್ಪಿಜಿ ಸ್ಥಿತಿ ಹೇಗಿದೆ?

ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಆಗಿಲ್ಲ. ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆ ಸಹಜವಾಗಿ ನಡೆದಿದೆ. ಕಮರ್ಷಿಯಲ್ ಗ್ಯಾಸ್ ಹಂಚಿಕೆಯು ಶೇ. 70ರ ಸಾಮರ್ಥ್ಯಕ್ಕೆ ಏರಿದೆ. ಮಾರ್ಚ್ ತಿಂಗಳಿನಲ್ಲಿ 2.9 ಲಕ್ಷ ಹೊಸ ಪಿಎನ್‌ಜಿ ಸಂಪರ್ಕಗಳನ್ನು ನೀಡಲಾಗುತ್ತದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಹೇಳಿಕೆಯಲ್ಲಿದೆ. ಈ ಕ್ರಮಗಳಿಂದ ಎಲ್ಪಿಜಿ ಮೇಲಿನ ಒತ್ತಡ ಕಡಿಮೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *