IPL 2026: ಇಂಡಿಯನ್ ಪ್ರೀಮಿಯರ್ ಪಂದ್ಯ ಶುರುವಾಗಿದೆ. ಮೊದಲ ಆಟಗಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದರೆ, ದ್ವಿತೀಯ ಆಟಗಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಈ ಎರಡು ಅಮೋಘ ಗೆಲುವುಗಳ ಬೆನ್ನಲ್ಲೇ ಸಿಎಸ್ಕೆ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಪ್ರವೇಶಿಸಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ…
ಕೊಲ್ಕತ್ತಾ ನೈಟ್ ರೈಡರ್ಸ್: ಕೆಕೆಆರ್ ತಂಡವು ಈ ಬಾರಿ ಸಮತೋಲನದಿಂದ ಕೂಡಿದೆ. ಅದರಲ್ಲೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಉತ್ತಮ ಬ್ಯಾಟರ್ ಇರುವ ಕಾರಣ ಈ ಬಾರಿ ಅವರ ಕಡೆಯಿಂದ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್: ರಿಷಭ್ ಪಂತ್ ಮುಂದಾಳತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಕಳೆದ ಬಾರಿ ಉತ್ತಮ ಪ್ರದರ್ಶನ ನೀಡಿದ್ದ ಎಲ್ ಎಸ್ ಜಿ ಈ ಬಾರಿ ಕೂಡ ಸಾಂಘಿಕ ಪ್ರದರ್ಶನದೊಂದಿಗೆ ಪ್ಲೇಆಫ್ ಗೆರಲಿದೆ ಎಂದು ರಾಯುಡು ಭವಿಷ್ಯ ನುಡಿದಿದ್ದಾರೆ.
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡದಲ್ಲಿ ಅನುಭವಿ ಆಟಗಾರರು. ಹೆಚ್ಚಿನ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಹೀಗಾಗಿ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿ ಕೂಡ ಪ್ಲೇಆಫ್ಗೇರಲಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಹಾಲಿ ಆಗಿ ಕಣಕ್ಕಿಳಿದಿರುವ ಆರ್ಸಿಬಿ ತಂಡದಲ್ಲಿ ಬದಲಾಗಿಲ್ಲ. ಅದರಲ್ಲೂ ಕಳೆದ ಬಾರಿ ಕಣಕ್ಕಿಳಿದಿದ್ದ ಆಟಗಾರರು ಈ ಬಾರಿ ಕೂಡ ತಂಡದಲ್ಲಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಈ ಬಾರಿ ಕೂಡ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಈ ಪ್ರದರ್ಶನದೊಂದಿಗೆ ಆರ್ಸಿಬಿ ಸಹ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ ಎಂದು ಅಂಬಾಟಿ ರಾಯುಡು ಭವಿಷ್ಯ ನುಡಿದಿದ್ದಾರೆ.




