
ಬೆಂಗಳೂರು, ಮಾರ್ಚ್ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಶಕ್ತಿಯ ಪರಿಣಾಮವಾಗಿ ಗಂಭೀರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗಾಗಿ ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿ ಇರುವ ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಹೆಚ್.ಎಸ್ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿ ಬಹಿರಂಗವಾಗಿದೆ.
ಶಕ್ತಿ ಯೋಜನೆ ಆರಂಭವಾದ ನಂತರ ಫೆಬ್ರವರಿ 2026ರವರೆಗೆ ರಾಜ್ಯದಾದ್ಯಂತ ಮಹಿಳೆಯರು ಒಟ್ಟು 680.87 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪ್ರಯಾಣಗಳನ್ನು ಮಾಡಲಾಗಿದೆ. ಇದರಲ್ಲೂ ಬಿಎಂಟಿಸಿ ಪಾಲು 217.62 ಕೋಟಿ ರೂಪಾಯಿಯಷ್ಟಿದೆ. ವರ್ಷದಿಂದ ವರ್ಷಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚು ಯೋಜನೆ ವೆಚ್ಚವೂ ಏರಿಕೆಯಾಗುತ್ತಿದೆ. ಆದರೆ ಸರ್ಕಾರದಿಂದ ಆಗುತ್ತಿರುವ ಪರಿಹಾರ ಮೊತ್ತವು ಅದರ ಅನುಪಾತದಲ್ಲಿ ಇನ್ನೂ ಕಾಣುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.
ಈ ಯೋಜನೆಗಾಗಿ ಸರ್ಕಾರದಿಂದ 3,097.27 ಕೋಟಿ ರೂ. ಸಂದಾಯವಾಗಬೇಕಿತ್ತು. ಆದರೆ ಸಾಧ್ಯಕ್ಕೆ ಕೇವಲ 2,247.35 ಕೋಟಿ ರೂ. ಮಾತ್ರ ಪರಿಹಾರವಾಗಿ ಲಭ್ಯವಿರುತ್ತದೆ, ಸುಮಾರು 850 ಕೋಟಿ ರೂ. ಕೊರತೆ ಉಂಟಾಗಿದೆ ಎಂದು
ನಿರ್ವಹಣಾ ಹೆಚ್ಚಾಗಿ ವೆಚ್ಚ ಪೇಚಾಟ
ಅದಲ್ಲದೆ ಶಕ್ತಿ ಯೋಜನೆ ಜಾರಿಗೂ ಮೊದಲೇ ಬಿಎಂಟಿಸಿ 1,383.86 ಕೋಟಿ ರೂಪಾಯಿಯಷ್ಟು ಕೊರತೆಯಿತ್ತು ಎಂಬುದು ಲಭ್ಯ. ಇಂಧನ ಕಂಪನಿಗಳಿಗೆ ಬಾಕಿ ಪಾವತಿಗಳು, ಭವಿಷ್ಯ ನಿಧಿ (PF) ಬಾಧ್ಯತೆಗಳು ಮತ್ತು ಪೂರೈಕೆದಾರರಿಗೆ ಕೊಡಬೇಕಾದ ಹಣಗಳು ಸಂಸ್ಥೆಯ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಕಠಿಣಗೊಳಿಸಿವೆ. ನಂತರದ ದಿನಗಳಲ್ಲಿ ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ ಪರಿಷ್ಕರಣೆ ಹಾಗೂ ನಿರ್ವಹಣಾ ವೆಚ್ಚಗಳ ಮೊತ್ತದಿಂದ ಭಾರ ಹೆಚ್ಚಾಗಿರುತ್ತದೆ.
ಈ ಸವಾಲುಗಳನ್ನು ಮನಗಂಡ ರಾಜ್ಯ ಸರ್ಕಾರವು ಪ್ರತಿ ತಿಂಗಳೂ ಶಕ್ತಿ ಯೋಜನೆಯಲ್ಲಿ ಹಣ ಬಿಡುಗಡೆ ಮಾಡುತ್ತಿದೆ. 2026ರ ಮಾರ್ಚ್ ತನಕ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಬಿಎಂಟಿಸಿ ಆರ್ಥಿಕ ಸ್ಥಿತಿಯನ್ನು ಸ್ಥಿರಗೊಳಿಸಲು ಸರ್ಕಾರವು 589.20 ಕೋಟಿ ರೂ. ಸಾಲವನ್ನು ಪಡೆಯಲು ಅನುಮತಿ ನೀಡಿದ್ದು, ಅದರ ಮರುಪಾವತಿಗೆ ಬಜೆಟ್ ಸಹಾಯವನ್ನು ಒದಗಿಸುತ್ತಿದೆ.
ಇದನ್ನೂ ಓದಿ ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ನಿರ್ಮಾಣ ಸಂಚಾರ!
ಹೆಚ್ಚುವರಿ ಬಸ್ಸುಗಳ ಖರೀದಿ
ಜೊತೆಗೆ ಸಾರಿಗೆ ವ್ಯವಸ್ಥೆಯನ್ನು ವಿಸ್ತರಿಸುವ ಮತ್ತು ಆಧುನೀಕರಿಸುವ ಪ್ರಯತ್ನಗಳೂ ನಡೆಯುತ್ತಿವೆ. ಡೀಸೆಲ್ ಹಾಗೂ ಇಟಿಕ್ಲಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ, ಪಿಎಂ ಐ-ಡ್ರೈವ್ ಸ್ಕೀಮ್ ಯೋಜನೆಡಿ 4,500 ಇಲಿಟಿಕ್ ಬಸ್ಸುಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಜೊತೆಗೆ 2026–27ರ ಬಜೆಟ್‌ನಲ್ಲಿ ಹೆಚ್ಚುವರಿ 1,000 ಡೀಸೆಲ್ ಬಸ್ಸುಗಳ ಖರೀದಿಯನ್ನು ಪ್ರಕಟಿಸಲಾಗಿದೆ.
ಒಟ್ಟಾರೆ, ಶಕ್ತಿ ಯೋಜನೆ ಮಹಿಳೆಯರ ಸಾರ್ವಜನಿಕ ಸಾರಿಗೆ ಬಳಕೆಯನ್ನು ಗಣನೀಯವಾಗಿ ಹೆಚ್ಚಿಸಿದರೂ, ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿರತೆಯ ಬಗ್ಗೆ ಆತಂಕಗಳು ಹೆಚ್ಚುತ್ತಿವೆ. ಪ್ರಯಾಣಿಕರ ಸಂಖ್ಯೆ ಏರಿಕೆ ಮತ್ತು ಕಾರ್ಯಾಚರಣಾ ವೆಚ್ಚಗಳ ನಡುವೆಯೂ ಸಮರ್ಪಕ ಪರಿಹಾರ ದೊರೆಯದಿದ್ದರೆ, ಮುಂದಿನ ದಿನಗಳಲ್ಲಿ ಸಂಸ್ಥೆಯ ಆರ್ಥಿಕ ಸ್ಥಿತಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.