
ಲಕ್ನೋ, (ಮಾರ್ಚ್ 30): ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ವಿಚ್ಛೇದನ (ವಿಚ್ಛೇದನ) ಸಂಭವಿಸಿದರೆ ಅದು ಸಂಭವಿಸಿದ ಸಂಗತಿಯಾಗಿದೆ. ಇತ್ತೀಚಿನ ದಿನಗಳಲ್ಲಿ ‘ಡಿವೋರ್ಸ್ ಪಾರ್ಟಿ’ ನೀಡಿ ಸಂಭ್ರಮಿಸುವುದನ್ನೂ ನಾವು ನೋಡಿದ್ದೇವೆ. ಅದರಂತೆ ಉತ್ತರ ಪ್ರದೇಶ (ಉತ್ತರ ಪ್ರದೇಶ) ಬಸ್ತಿ ಜಿಲ್ಲೆಯ 25 ವರ್ಷದ ಯುವಕನೋರ್ವ ತನಗೆ ಪತ್ನಿಯಿಂದ ಕೋರ್ಟಿನಲ್ಲಿ ವಿಚ್ಛೇದನ ಸಿಕ್ಕಿದ್ದಕ್ಕೆ ದೇವರಿಗೆ ಧನ್ಯವಾದ ಸಲ್ಲಿಸಲು ಬರೋಬ್ಬರಿ 9 ಕಿಲೋಮೀಟರ್ ದೂರ ದೀಡ ನಮಸ್ಕಾರ ಹಾಕುವ ಮೂಲಕ ವಿಶಿಷ್ಟವಾಗಿ ಹರಕೆ ತೀರಿಸಿದ್ದಾನೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಬಸ್ತಿ ಜಿಲ್ಲೆಯ ನರ್ಖೋರಿಯಾ ಗ್ರಾಮದ ಜೋಗೇಶ್ ಎಂಬ ಯುವಕ ಈ ವಿಚಿತ್ರ ಸಾಹಸ ಮಾಡಿದವರು. ನವರಾತ್ರಿಯ ಶುಭ ಸಂದರ್ಭದಲ್ಲಿ ಅವರು ತಮ್ಮ ಗ್ರಾಮದಿಂದ ಸ್ಥಳೀಯ ‘ಬೈದಾ ಸಮಯ ಮಾತಾ’ ದೇವಸ್ಥಾನದವರೆಗೆ ನೆಲದ ಮೇಲೆ ಮಲಗಿ ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಸಾಗಿದ್ದಾರೆ. ಬೆಳಿಗ್ಗೆ ಆರಂಭವಾದ ಈ ಕಠಿಣ ಯಾತ್ರೆಯು ಸುಮಾರು 12 ಗಂಟೆಗಳ ಕಾಲ ನಡೆದಿದ್ದು, ಇಡೀ ಹಾದಿಯ ಸಂಪೂರ್ಣ ಜೋಗೇಶ್ ಅವರು ಉಪವಾಸವಿದ್ದು ‘ಜೈ ಶ್ರೀರಾಮ್’ ಮತ್ತು ‘ಜೈ ಬಜರಂಗಬಲಿ’ ಎಂದು ಘೋಷಣೆ ಕೂಗುತ್ತಾ ದೇವಸ್ಥಾನ ತಲುಪಿದ್ದಾರೆ.
ಇದನ್ನೂ ನೋಡಿ: ಬಿರುಗಾಳಿಗೆ ಮಂಟಪವನ್ನೇ ಹಾರದಂತೆ ತಡೆದವನು, ಇನ್ನು ಪತ್ನಿ ಕೈ ಬಿಡುವನೇ!
ವಿಚ್ಛೇದನದ ಪಕ್ಷಗಳು ಹೊಸ ಬಿಸಿ ಆಹ್ವಾನವಾಗಿ ಹೊರಹೊಮ್ಮುತ್ತಿರುವ ಸಮಯದಲ್ಲಿ, ಬಸ್ತಿಯ 25 ವರ್ಷದ ವ್ಯಕ್ತಿಯೊಬ್ಬರು ಸ್ಥಳೀಯ ದೇವತೆಗೆ ವಿಶಿಷ್ಟವಾದ ಕೃತಜ್ಞತೆಯೊಂದಿಗೆ ವೈಯಕ್ತಿಕ ಮೈಲಿಗಲ್ಲನ್ನು ಆಚರಿಸಿದರು.
ನವರಾತ್ರಿಯ ಶುಭ ಸಂದರ್ಭವನ್ನು ಸದುಪಯೋಗಪಡಿಸಿಕೊಂಡು, ಹೊಸದಾಗಿ ವಿಚ್ಛೇದನ ಪಡೆದ ವ್ಯಕ್ತಿ 9-ಕಿಮೀ… pic.twitter.com/SZlQqvRMyn
– ಹೇಟ್ ಡಿಟೆಕ್ಟರ್
(@HateDetectors) ಮಾರ್ಚ್ 30, 2026
ಪ್ರಕರಣದ ಹಿನ್ನೆಲೆ
ಜೋಗೇಶ್ ಅವರಿಗೆ 2022 ರಲ್ಲಿ ಮದುವೆಯಾಗಿತ್ತು. ಆದರೆ ಮದುವೆಯಾದ ಮೊದಲ ದಿನದಿಂದಲೇ ದಂಪತಿಗಳ ನಡುವೆ ತೀವ್ರ ಗಲಾಟೆಗಳು ಶುರುವಾದವು. ಇದರಿಂದ ದಾಂಪತ್ಯ ಜೀವನ ನರಕಸದೃಶವಾದಾಗ ಜೋಗೇಶ್ ನ್ಯಾಯಾಲಯದ ಮೊರೆ ಹೋಗಿದ್ದರು. ನನಗೆ ಈ ಕಿರಿಕಿರಿ ತುಂಬಿದ ದಾಂಪತ್ಯದಿಂದ ಮುಕ್ತಿ ಸಿಕ್ಕರೆ ದೇವಸ್ಥಾನಕ್ಕೆ ದೀಡ ನಮಸ್ಕಾರ ಮಾಡುತ್ತೇನೆ” ಎಂದು ಅವರು ದೇವರಿಗೆ ಹರಕೆ ಹೊತ್ತಿದ್ದರು.
ಈ ಯಾತ್ರೆಗಾಗಿ ಜೋಗೇಶ್ ಮುಂಚಿತವಾಗಿಯೇ ಉಪವಿಭಾಗಾಧಿಕಾರಿಗಳಿಂದ (SDM) ಅನುಮತಿ ಪಡೆದಿದ್ದರು. ಯಾತ್ರೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಂಚಾರಕ್ಕೆ ಅಡ್ಡಿಯಾಗದಂತೆ ಪೊಲೀಸರು ಭದ್ರತೆ ನೀಡಿದ್ದರು. ಜೋಗೇಶ್ ಅವರ ಸಂಬಂಧಿಕರು ಮತ್ತು ಕುಟುಂಬದ ಸದಸ್ಯರು ಕೂಡ ಅವರ ಜೊತೆಯಲ್ಲಿದ್ದರು. ದೇವಸ್ಥಾನ ತಲುಪಿದ ನಂತರ ಅವರು ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.
(@HateDetectors)