Headlines

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?


ಹೊಸ ಚರ್ಚೆ ಹುಟ್ಟುಹಾಕಿದ KPS ಮ್ಯಾಗ್ನೆಟ್ ಶಾಲೆ ಯೋಜನೆ: ಆರಂಭಕ್ಕೂ ಮುನ್ನವೇ ಅಪಸ್ವರ ಏಕೆ?

ತುಮಕೂರು, ಮಾರ್ಚ್ 30: ಅದೊಂದು ಕಾಲವಿತ್ತು. ಶಾಲೆ ಎಂದರೇ ಸಾಕು ಮಕ್ಕಳು ಕಿ.ಮೀ ದೂರ ಹೆಜ್ಜೆ ಹಾಕಬೇಕಿತ್ತು. ಅಲ್ಲಿಂದೂರಿಗೆ ಬಂದು ಪಾಠ ಕೇಳಬೇಕಿತ್ತು. ನಂತರದಲ್ಲಿ ನಮ್ಮೂರ ಶಾಲೆ ಎಂಬಂತೆ ಹಳ್ಳಿಹಳ್ಳಿಯಲ್ಲೂ ಸರ್ಕಾರಿ ಶಾಲೆ ತೆರೆಯಲಾಗಿದೆ. ಮಕ್ಕಳು ಖುಷಿಯಾಗಿ ಪಾಠ ಕೇಳುತ್ತಿದ್ದರು. ಆದ್ರೀಗ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ (ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳು) ನೀತಿ ಆರಂಭಕ್ಕೂ ಮುನ್ನವೇ ಒಂದಷ್ಟು ಅಪಸ್ವರದ ಚರ್ಚೆ ಸೃಷ್ಟಿಸಿದೆ.

ವಿವಿಧೋದ್ದೇಶಿತ ಶಾಲಾ ನೀತಿಗೆ ವಿರೋಧ

ಕೆಪಿಎಸ್ ಶಾಲೆ, ಕರ್ನಾಟಕ ಸಾರ್ವಜನಿಕ ಶಾಲೆಗಳ ಮ್ಯಾಗ್ನೆಟ್ ಯೋಜನೆ. ಇದು ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆ ಮತ್ತು ಏಕೀಕರಣಕ್ಕಾಗಿ ಹಮ್ಮಿಕೊಂಡಿರುವ ನೀತಿ. ಸುಮಾರು ಒಂದರಿಂದ ಐದು ಕಿ.ಮೀ ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಿ, ಸುಮಾರು 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾಮರ್ಥ್ಯದ ಆಧುನಿಕ ಸೌಲಭ್ಯಗಳಿರುವ ಶಾಲೆಗಳನ್ನು ನಿರ್ಮಿಸುವ ಗುರಿಯಾಗಿದೆ. ಆ ಮೂಲಕ ಪೂರ್ವ ಮತ್ತು ಪ್ರಾಥಮಿಕದಿಂದ ಪಿಯುಸಿವರೆಗೆ ಒಂದೇ ಸೂರಿನಡಿ ಶಿಕ್ಷಣ ಮತ್ತು ಆಧುನಿಕ ಮೂಲಸೌಕರ್ಯಗಳನ್ನು ಒದಗಿಸುವ ಉದ್ದೇಶವಿದೆ. ಈ ರೀತಿಯ ವಿವಿಧೋದ್ದೇಶದ ಶಾಲಾ ನೀತಿಗೆ ಈಗ ತುಮಕೂರಿನಲ್ಲಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ವರ್ಷಗಳಿಂದ ಅಭಿವೃದ್ಧಿ ಕಾಣದೆ ಉಳಿದ ಬಾಲಕಿಯರ ವಸತಿ ನಿಲಯ; ಮೌಢ್ಯವನ್ನೇ ನೆಪ ಮಾಡಿಕೊಂಡಿತಾ ಸರ್ಕಾರ?

ತುಮಕೂರು ಜಿಲ್ಲೆಯ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೀತಿಗೆ ದಿನದಿಂದ ದಿನಕ್ಕೆ ವಿರೋಧದ ಕೂಗು ಜೋರಾಗುತ್ತಿದೆ. ವಿಲೀನ ನೀತಿ ಪ್ರಕಾರ ಹಳ್ಳಿಗಳ ಸರ್ಕಾರಿ ಶಾಲೆಗಳನ್ನು ಮುಚ್ಚುವ ಕ್ರಮದ ವಿರುದ್ಧ ಶಾಲಾ ಮಕ್ಕಳು, ಪೋಷಕರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ತುಮಕೂರು ನಗರ, ಶಿರಾ, ಕೊರಟಗೆರೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಕಾರಣ, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ನಮ್ಮೂರ ಸರ್ಕಾರಿ ಶಾಲೆಗಳಿಗೆ ಬೀಗ ಹಾಕುವ ಮುಖಾಂತರ ಮುಚ್ಚಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿ ಜಿಲ್ಲೆಯಲ್ಲಿ ಒಟ್ಟು 1200 ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ

ಇನ್ನು ಈ ಹೋರಾಟಕ್ಕೆ ಐಡಿಎಸ್ಒ ಸಂಘಟನೆ ಜೊತೆಯಾಗಿದೆ. ಹಳ್ಳಿಹಳ್ಳಿಯ ಸಣ್ಣ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಪ್ರತಿಭಟನೆ ನಡೆಸಲಾಗುತ್ತಿದೆ. ಗ್ರಾಮಸ್ಥರು ನಮ್ಮ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕೂಗು ಹಂತವಾಗಿ ಜಿಲ್ಲೆಯಾದ್ಯಂತ ವಿರೋಧದ ಅಲೆಯು ಹೆಚ್ಚಾಗುತ್ತಿದೆ, ಸರ್ಕಾರದ ನಿರ್ಧಾರ ಹಿಂಪಡೆಯುವಂತೆ ಆಗ್ರಹವಿದೆ.

ಇದನ್ನೂ ಓದಿ: ಚಲಿಸುವ ಬಸ್ ಕಿಟಕಿಯಲ್ಲಿ ಬ್ಯಾಗ್ ಇಡಲು ಹೋಗಿ ಚಕ್ರಕ್ಕೆ ಸಿಲುಕಿದ ವಿದ್ಯಾರ್ಥಿನಿ ಕಾಲು: ಸೆರೆಯಾಯ್ತು ಭೀಕರ ದೃಶ್ಯ

ಸದ್ಯ ದಿನದಿಂದ ದಿನಕ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲಾ ನೀತಿಗೆ ತುಮಕೂರಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಈ ಚಿಂತನೆ ನಿಲ್ಲಿಸುವಂತೆ ಒತ್ತಾಯ ಕೇಳಿಬರುತ್ತಿದೆ. ಸದ್ಯ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದೆ, ಸರ್ಕಾರ ಈ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *