
ಉಡುಪಿ, (ಮಾರ್ಚ್ 30): ಮದುವೆಯಾದ (ಮದುವೆ) ಒಂದೇ ತಿಂಗಳಿಗೆ ಉದ್ಯಮಿ (ಉದ್ಯಮಿ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ (ಉಡುಪಿ) ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾಗಿರುವ ಸುದೀಪ್ ಶೆಟ್ಟಿ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ತಿಂಗಳು ಮದುವೆಯಾಗಿದ್ದ ಉದ್ಯಮಿ ಸುದೀಪ್ ಶೆಟ್ಟಿ, ಮಾರ್ಚ್ 17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಹತ್ತಾರು ದಿನ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಚಿಕಿತ್ಸೆ ಫಲಿಸದೆ ಮಾರ್ಚ್ 29ರಂದು ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುದೀಪ್ ತಂದೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸುದೀಪ್ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ.
ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ
ಸುದೀಪ್ ಹಾಗೂ ಸೌಮ್ಯ ಶೆಟ್ಟಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮೂಲತಃ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಸೌಮ್ಯ ಶೆಟ್ಟಿ, ಜೊತೆ ಸುದೀಪ್ ಕಳೆದ ಫೆಬ್ರವರಿ 17ರಂದು ಪುತ್ತೂರು ರಿಜಿಸ್ಟರ್ ಆಫೀಸಿನಲ್ಲಿ ಮದುವೆಯಾಗಿದ್ದರು. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಸೌಮ್ಯ ಶೆಟ್ಟಿ ಈ ಹಿಂದೆ ಒಬ್ಬ ಮದುವೆಯಾಗಿ ಪತಿಗೆ ಡಿವೋರ್ಸ್ ನೀಡಿ ಸುದೀಪ್ ಜೊತೆ ವಿವಾಹವಾಗಿದ್ದರು. ಆದರೆ, ಸೌಮ್ಯ ಜೊತೆ ವಿವಾಹದ ಬಗ್ಗೆ ಸುದೀಪ್ ಕುಟುಂಬ ಆಕ್ಷೇಪ ವ್ಯಕ್ತಪಡಿಸಿತ್ತು.
ಸೌಮ್ಯ ಜೊತೆ ಮದುವೆಯಾಗಿದ್ದಕ್ಕೆ ಸುದೀಪ್ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಒಂದೇ ತಿಂಗಳಲ್ಲಿ ಸಂಬಂಧ ಬಿಗಡಾಯಿಸಿತ್ತು. ಬಳಿಕ ಸುದೀಪ್ ಕಳೆದ ಮಾರ್ಚ್ 17 ರಂದು ಕಡಬ ತಾಲೂಕಿನ ನೆಲ್ಯಾಡಿಯಲ್ಲಿದ್ದ ವೇಳೆ ಅಲ್ಲಿಗೆ ಬಂದಿದ್ದ ಸೌಮ್ಯ ಬೆದರಿಕೆ ಹಾಕ ಆರೋಪ ಕೇಳಿಬಂದಿದೆ. ಇದಾದ ಮಾರ್ಚ್ 22 ರಂದು ಸುದೀಪ್ ವಿಷ ಸೇವಿಸಿರುವ ಬಗ್ಗೆ ಸೌಮ್ಯ ಬಳಿಕ ಮಾಹಿತಿ ನೀಡಿದ್ದರು. ಮಾ.23 ರಂದು ವಿಷ ಸೇವಿಸಿದ ಸುದೀಪ್ ಅವರನ್ನು ಸೌಮ್ಯ ನಿಟ್ಟೆ ಗಜಾರಿಯ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಮಾರ್ಚ್ 24 ರಂದು ಸುದೀಪ್ ಅವರು ಮಂಗಳೂರಿನ ಏನಪೋಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ದುರಾದೃಷ್ಟವಶಾತ್ ಸುದೀಪ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29 ರಂದು ಸಾವನ್ನಪ್ಪಿದ್ದಾರೆ.
ಮಗ ಸಾವನ್ನಪ್ಪಿದ ಬೆನ್ನಲ್ಲೇ ಸೊಸೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಮೃತ ಸುದೀಪ್ ತಂದೆ ದಾಮೋದರ್ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾರ್ಕಳ ನಗರ ಪೊಲೀಸರು, ಮರಣೋತ್ತರ ಪರೀಕ್ಷೆ ನಂತರ ಮುಂದಿನ ತನಿಖೆ ನಡೆಸಲಾಗುವುದು.
ಪತ್ನಿ ಸೌಮ್ಯ ಶೆಟ್ಟಿ ಹೇಳಿದ್ದೇನು?
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಸೌಮ್ಯ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸುದೀಪ್ ಸಾವಿಗೆ ನಾನು ಕಾರಣವಲ್ಲ. ಸುದೀಪ್ ವಿಷ ಸೇವಿಸಿರುವ ಬಗ್ಗೆ ಪೊಲೀಸರಿಗೆ ಹೇಳಿಕೆ. ವಿಷ ಸೇವಿಸಿದ ನಂತರವೂ 4-5 ದಿನ ಆರಾಮಾಗಿದ್ದರು. ಬಳಿಕ ಫುಡ್ ಪಾಯಿಸನ್ ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಜಾಂಡಿಸ್ ಆಗಿರಬಹುದು ಎಂದು ಚಿಕಿತ್ಸೆ ನೀಡಲಾಗಿದೆ. ಯಾವ ಕಾರಣಕ್ಕೆ ವಿಷ ಸೇವಿಸಿಲ್ಲ ಎಂದು ತಮ್ಮ ಮೇಲಿನ ಆರೋಪವನ್ನು ಮಾಡಿದ್ದಾರೆ.