Headlines

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?


ಕೆರಾಡಿ ಫಿಲ್ಮ್ ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ (ರಿಷಬ್ ಶೆಟ್ಟಿ) ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ ಬಿ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್, ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದು ಚರ್ಚೆ ನಡೆಯುತ್ತಿದೆ. ಈಗ ಅವರು ರಿಷಬ್ ಶೆಟ್ಟಿ ಫಿಲ್ಮ್ಸ್, ರಿಷಬ್ ಶೆಟ್ಟಿ ಫೌಂಡೇಷನ್ ಮತ್ತು ಪತ್ನಿ ಪ್ರಗತಿ ಶೆಟ್ಟಿ ಅವರು ಮಾತ್ರ ಫಾಲೋ ಮಾಡುತ್ತಿದ್ದಾರೆ. ಹೀಗಿರುವಾಗಲೇ ಅವರು ಕೆರಾಡಿಯಲ್ಲಿ ತಾವು ಮಾಡಿದ ಸಾಧನೆಯ ಬಗ್ಗೆ ಹೇಳಿದ್ದಾರೆ.

ಸಾಮಾನ್ಯವಾಗಿ ಸಿನಿಮಾ ನಿರ್ಮಾಣ ಮಾಡುವಾಗ ದೊಡ್ಡ ದೊಡ್ಡ ಸಿನಿಮಾ ಸಿಟಿಯಲ್ಲಿ ಸೆಟ್ ನಿರ್ಮಾಣವಾಗಿದೆ. ಆದರೆ, ರಿಷಬ್ ಶೆಟ್ಟಿ ಅವರು ಕುಂದಾಪುರದ ಕೆರಾಡಿಯಲ್ಲೇ ‘ಕಾಂತಾರ 2’ ಚಿತ್ರದ ಸೆಟ್ ನಿರ್ಮಾಣ ಮಾಡಿದರು. ಈ ಸೆಟ್ ಅದ್ಭುತ ಎಂಬುದು ‘ಕಾಂತಾರ: ಅಧ್ಯಾಯ 1’ ಸಿನಿಮಾ ನೋಡಿದವರಿಗೆ ಗೊತ್ತಾಗುತ್ತದೆ. ಈಗ ಇದನ್ನು ಸಿನಿಮಾ ಸಿಟಿಯಾಗಿ ಬದಲಾಯಿಸಿರೋದಾಗಿ ಹೇಳಿದ್ದಾರೆ.

‘ಕಾಂತಾರದ ಬಳಿಕ ಕುಂದಾಪುರ, ಬೈಂದೂರು ಭಾಗ ಸಿನಿಮಾ ಸಿಟಿಯಾಗಿ ಬದಲಾಗಿದೆ. ಈ ಭಾಗದಲ್ಲಿ ಇನ್ನಷ್ಟು ಸಿನಿಮಾ ಶೂಟ್ ಆಗುವ ನಿರೀಕ್ಷೆ ಇದೆ. ಈ ಭಾಗದ ಜನರಿಗೆ ಸಿನಿಮಾದ ಮೇಲಿನ ಗೌರವ ಹೆಚ್ಚಾಗುತ್ತದೆ’ ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ.

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

ಜೂಮ್ ಔಟ್ (@zoomoutkannada) ಮೂಲಕ ಹಂಚಿಕೊಂಡ ಪೋಸ್ಟ್

ಕುಂದಾಪುರ ಸೇರಿದಂತೆ ಕರಾವಳಿ ಭಾಗದಲ್ಲಿ ಅಪಾರ ಪ್ರಕೃತಿ ಸೌಂದರ್ಯವಿದೆ. ಇದನ್ನು ಕೆಲವು ಸಿನಿಮಾಗಳಲ್ಲಿ ಸೆರೆ ಹಿಡಿಯಲಾಗಿದೆ. ಆದರೆ, ಇದನ್ನು ಸಂಪೂರ್ಣವಾಗಿ ಬಳಸಿಕೊಂಡಿಲ್ಲ ಎಂಬುದು ರಿಷಬ್ ಶೆಟ್ಟಿ ಅವರ ಅಭಿಪ್ರಾಯ. ‘ಕಾಂತಾರ’ ಹಾಗೂ ‘ಕಾಂತಾರ: ಅಧ್ಯಾಯ 1’ ಬಳಿಕ ಕರಾವಳಿಯ ಸಂಸ್ಕೃತಿ ಎಲ್ಲರಿಗೂ ತಿಳಿದಿರುವ ವಿಶೇಷ.

ಇದನ್ನೂ ಓದಿ: ‘ಅಧ್ಯಾಯ ಎರಡು’: ‘ಕಾಂತಾರ: ಅಧ್ಯಾಯ 2’ ಆರಂಭಿಸಿದರೇ ರಿಷಬ್ ಶೆಟ್ಟಿ?

ರಿಷಬ್ ಶೆಟ್ಟಿ ಅವರು ಸದ್ಯ ‘ಜೈ ಹನುಮಾನ್’ ಸಿನಿಮಾ ಶೂಟ್ ಅಲ್ಲಿ ಬ್ಯೂಸಿ ಇದ್ದಾರೆ. ಈ ಮುಹೂರ್ತ ಇತ್ತೀಚೆಗೆ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ಅಪಾರವಾದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *