
ಬೆಂಗಳೂರು, ಮಾರ್ಚ್ 31: ಯುವತಿಗೆ ಕಿರುಕುಳ ನೀಡಿದ ಆರೋಪದಡಿ ರಾಪಿ ಬೈಕ್ ಚಾಲಕ ಮೊಹಮ್ಮದ್ ಖಾಜಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರು ಬಿಟಿಎಂ ಲೇಔಟ್ ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ಸಂದರ್ಭದಲ್ಲಿ, ಚಾಲಕ ಮೊಹಮ್ಮದ್ ಖಾಜಾ ದಾರಿಯ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವರ್ತನೆಯಿಂದ ಅಸಮಾಧಾನಗೊಂಡ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಇಂದಿರಾನಗರ ಪೊಲೀಸರು, ರಾಪಿಡೋ ಚಾಲಕ ಮೊಹಮ್ಮದ್ ಖಾಜಾನನ್ನು ಬಂಧಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ