
ಪಾಟ್ನಾ, ಮಾರ್ಚ್ 31: ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಂದಿ ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಹೊಂದಿದ್ದಾರೆ.ಚೈತ್ರ ಮಾಸದ ಕಳೆದ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯಲಾಗಿದೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ